ನ್ಯೂಸ್

ಕೆ-ಸೆಟ್ ಪ್ರವೇಶ ಪತ್ರ ಬಿಡುಗಡೆ

ಎನ್.ಎಲ್. ಶಿವಮಾದು

ಬೆಂಗಳೂರು: ಕರ್ನಾಟಕ ಪರೀಕ್ಷಾ ಪ್ರಾಧಿಕಾರ(ಕೆಇಎ) ಜ.13ರಂದು ನಡೆಸಲಿರುವ ಕೆ-ಸೆಟ್ ಪರೀಕ್ಷೆಯ ಪ್ರವೇಶ ಪತ್ರವನ್ನು ಬಿಡುಗಡೆ ಮಾಡಿದೆ.

ವಿದ್ಯಾರ್ಥಿಗಳು https://cetonline.karnataka.gov.in/kea/

ವೆಬ್‌ಸೈಟ್‌ಗೆ ಭೇಟಿ ನೀಡಿ ಪ್ರವೇಶ ಪತ್ರವನ್ನು ಡೌನ್‌ಲೋಡ್ ಮಾಡಿಕೊಳ್ಳಬಹುದು. ಪ್ರವೇಶ ಪತ್ರ ಮತ್ತು ಅಭ್ಯರ್ಥಿಗಳಿಗೆ ನೀಡಲಾಗಿರುವ ಸೂಚನೆಗಳನ್ನು ಡೌನ್‌ಲೋಡ್ ಮಾಡಿಕೊಳ್ಳಲು ಹಾಗೂ ಮಾರ್ಗದರ್ಶನಗಳನ್ನು ತಪ್ಪದೇ ಅನುಸರಿಸಲು ಸೂಚಿಸಿದೆ. ಪರೀಕ್ಷೆಯು ಬೆ.10ರಿಂದ 2ಗಂಟೆಯವರೆಗೆ ನಡೆಯಲಿದೆ. ಹೆಚ್ಚಿನ ಮಾಹಿತಿ ವಿದ್ಯಾರ್ಥಿಗಳು ವೆಬ್‌ಸೈಟ್ ನೋಡಬಹುದಾಗಿದೆ.