ನ್ಯೂಸ್

ಬಿಜೆಪಿ ಮಾಜಿ ಶಾಸಕ ಪ್ರೀತಂ ಗೌಡಗೆ ರಿಲೀಫ್‌; ಬಂಧಿಸದಂತೆ ಹೈಕೋರ್ಟ್ ಆದೇಶ

ಬೆಂಗಳೂರು: ಹಾಸನ ಪೆನ್‌ಡ್ರೈವ್ ಹಂಚಿಕೆ ಆರೋಪದಲ್ಲಿ ಮಾಜಿ ಬಿಜೆಪಿ ಶಾಸಕ ಪ್ರೀತಂ ಗೌಡ ಅವರನ್ನು ಅವರನ್ನು ಬಂಧಿಸಿದಂತೆ ಹೈಕೋರ್ಟ್ ಶುಕ್ರವಾರ ಪೊಲೀಸರಿಗೆ ಆದೇಶಿಸಿದೆ. ಈ ಮೂಲಕ ಪ್ರೀತಂಗೆ ಬಂಧನದಿಂದ ಬಿಗ್​ ರಿಲೀಫ್ ಸಿಕ್ಕಿದೆ.

ಪ್ರಕರಣದಲ್ಲಿ ಪ್ರೀತಂ ಗೌಡರನ್ನು ಬಂಧಿಸದಂತೆ ಕೋರ್ಟ್‌ ಆದೇಶ ನೀಡಿ ವಿಶೇಷ ತನಿಖಾ ತಂಡದ ವಿಚಾರಣೆಗೆ ಹಾಜರಾಗುವಂತೆ ಸೂಚಿಸಿದೆ.

ವಿಡಿಯೋ ಹಂಚಿಕೆ ಆರೋಪದ ಮೇಲೆ ಮಾಜಿ ಶಾಸಕ ಪ್ರೀತಂ ಗೌಡ, ಸೇರಿದಂತೆ ಇತರ ಮೂವರ ವಿರುದ್ಧ ಎಸ್ಐಟಿ ಪ್ರಕರಣ ದಾಖಲಿಸಿತ್ತು. ಪ್ರೀತಂ ಗೌಡ ವಿರುದ್ಧ ಪೆನ್‌ಡ್ರೈವ್ ಹಂಚಿಕೆ ಆರೋಪ ಕೇಳಿ ಬಂದಿತ್ತು. ಇದಕ್ಕೆ ಪೂರಕ ಎಂಬಂತೆ ಅವರ ಇಬ್ಬರ ಆಪ್ತರನ್ನು ಎಸ್‌ಐಟಿ ಬಂಧಿಸಿದೆ. ಬಂಧನ ಭೀತಿಯಲ್ಲಿ ಪ್ರೀತಂ ಗೌಡ ಅವರು ಬಂಧನದಿಂದ ರಕ್ಷಣೆ ಕೋರಿ ಹೈಕೋರ್ಟ್‌ ಮೊರೆ ಹೋಗಿದ್ದರು.

ಪ್ರಕರಣದ ವಿಚಾರಣೆ ನಡೆಸಿದ ಹೈಕೋರ್ಟ್, ಪ್ರೀತಂ ಗೌಡ ವಿರುದ್ಧದ ತನಿಖೆಗೆ ತಡೆ ನೀಡಲು ನಿರಾಕರಿಸಿದೆ. ಆರೋಪಿಯ ವಿರುದ್ಧ ಎಸ್ಐಟಿ ತನಿಖೆ ಮುಂದುವರಿಸಬಹುದು. ವಿಚಾರಣೆಗೆ ಸಹಕರಿಸುವಂತೆ ಅರ್ಜಿದಾರ ಪ್ರೀತಂ ಗೌಡಗೆ ಹೈಕೋರ್ಟ್ ಸೂಚನೆ ನೀಡಿದೆ.