ನ್ಯೂಸ್

ಹುಬ್ಬಳ್ಳಿ-ಧಾರವಾಡಕ್ಕೆ ಮೊದಲ ಮಹಿಳಾ ಪೊಲೀಸ್ ಕಮಿಷನರ್ ರೇಣುಕಾ ಕೆ. ಸುಕುಮಾರ್

ಬೆಂಗಳೂರು: ಹುಬ್ಬಳ್ಳಿ-ಧಾರವಾಡ ಪೊಲೀಸ್ ಕಮಿಷನರ್ ಆಗಿ ಐಪಿಎಸ್ ಅಧಿಕಾರಿ ರೇಣುಕಾ ಕೆ. ಸುಕುಮಾರ್ ಅವರನ್ನು ಬುಧವಾರ ವರ್ಗಾವಣೆ ಮಾಡಿ ಸರ್ಕಾರ ಆದೇಶಿಸಿದೆ. ಅವಳಿನಗರಕ್ಕೆ ಮೊದಲ ಮಹಿಳಾ ಪೊಲೀಸ್ ಕಮಿಷನರ್ ಆಗಿದ್ದಾರೆ.

ಆಗಸ್ಟ್ 9ರಂದು ಹೊರಡಿಸಿದ ವರ್ಗಾವಣೆ ಆದೇಶದಲ್ಲಿ ಐಪಿಎಸ್ ಅಧಿಕಾರಿ ಸಂತೋಷ್ ಬಾಬು ಬದಲಿಗೆ ಹುಬ್ಬಳ್ಳಿ-ಧಾರವಾಡ ಪೊಲೀಸ್ ಆಯುಕ್ತರಾಗಿ ರೇಣುಕಾ ಅವರನ್ನು ನೇಮಿಸಿ ಸರ್ಕಾರ ಆದೇಶಿಸಿದೆ. ಹುಬ್ಬಳ್ಳಿ-ಧಾರವಾಡ ಕಮಿಷನರ್ ಹುದ್ದೆಯನ್ನು ಮಂಡ್ಯ ಪೊಲೀಸ್ ವರಿಷ್ಠಾಧಿಕಾರಿ ಹುದ್ದೆಗೆ ಸಮನಾಗಿ ಪರಿಗಣಿಸಲಾಗುವುದು ಎಂದು ಆದೇಶದಲ್ಲಿ ಉಲ್ಲೇಖಿಸಲಾಗಿದೆ.

2011ರ ಬ್ಯಾಚ್‌ನ ಐಪಿಎಸ್ ಅಧಿಕಾರಿ ರೇಣುಕಾ, 2018ರಲ್ಲಿ ಹುಬ್ಬಳ್ಳಿ-ಧಾರವಾಡ ಪೊಲೀಸ್ ಕಮಿಷನರೆಟ್‌ನಲ್ಲಿ ಉಪ ಪೊಲೀಸ್ ಆಯುಕ್ತರಾಗಿ ಸೇವೆ ಸಲ್ಲಿಸಿದ್ದರು. ಡಿಸಿಪಿಯಾಗಿ ಸೇವೆ ಸಲ್ಲಿಸಿದ್ದ ಮೊದಲ ಮಹಿಳಾ ಅಧಿಕಾರಿಯೂ ಆಗಿದ್ದರು.

ಇದೆ ವೇಳೆ ರಾಜ್ಯ ಪೊಲೀಸ್ ನೇಮಕಾತಿ ವಿಭಾಗದ ಡಿಜಿಪಿ ಕಮಲ್ ಪಂತ್ ಅವರಿಗೆ ಅಗ್ನಿ ಶಾಮಕ ಮತ್ತು ತುರ್ತು ಸೇವೆಗಳ ಇಲಾಖೆ, ಎಸ್‌ಡಿಆರ್‌ಎ್, ಹೋಂ ಗಾರ್ಡ್ ವಿಭಾಗವನ್ನು ಹೆಚ್ಚುವರಿ ಹೋಣೆ ನೀಡಲಾಗಿದೆ.