ನ್ಯೂಸ್

ಜಾಮೀನು ಷರತ್ತು ಸಡಿಲಿಕೆಗೆ ಬಿಎಸ್‌ವೈ ಅರ್ಜಿ: ಆದೇಶದ ಕುರಿತು ಸ್ಪಷ್ಟನೆಗೂ ಮನವಿ

Bengaluru - General - Pavithra Kundapur

ಬೆಂಗಳೂರು: ಅಪ್ರಾಪ್ತೆಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ತಮ್ಮ ವಿರುದ್ಧ ವಿಶೇಷ ನ್ಯಾಯಾಲಯದಲ್ಲಿ ತೆಗೆದುಕೊಂಡಿದ್ದ ಕಾಗ್ನಿಜೆನ್ಸ್ ರದ್ದುಪಡಿಸಿ, ಮತ್ತೆ ಹೊಸದಾಗಿ ಪರಿಗಣಿಸುವಂತೆ ಸೂಚನೆ ನೀಡಿರುವ ಆದೇಶದ ಕುರಿತು ಸ್ಪಷ್ಟನೆ ಮತ್ತು ಜಾಮೀನಿಗೆ ವಿಧಿಸಿರುವ ಷರತ್ತುಗಳನ್ನು ಸಡಿಲಿಸುವಂತೆ ಕೋರಿ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಸಲ್ಲಿಸಿದ ಎರಡು ಪ್ರತ್ಯೇಕ ಅರ್ಜಿಯ ವಿಚಾರಣೆಯನ್ನು ಹೈಕೋರ್ಟ್ ಮುಂದೂಡಿದೆ.

ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರ ಏಕಸದಸ್ಯ ಪೀಠ ಸರ್ಕಾರಕ್ಕೆ ನೋಟಿಸ್ ಜಾರಿಗೊಳಿಸಿದೆ. ಪ್ರಕರಣ ಸಂಬಂಧ ಜಾಮೀನು ನೀಡುವ ಸಂದರ್ಭದಲ್ಲಿ ನ್ಯಾಯಾಲಯದ ವ್ಯಾಪ್ತಿ ಬಿಟ್ಟು ಹೋಗದಂತೆ ಷರತ್ತು ವಿಧಿಸಲಾಗಿದೆ. ಇದರಿಂದ ರಾಜ್ಯದಲ್ಲಿ ಸಂಚರಿಸುವುದಕ್ಕೆ ಅವಕಾಶ ಇಲ್ಲವಾಗಿದೆ. ಆದ್ದರಿಂದ ಷರತ್ತುಗಳನ್ನು ಸಡಿಸಲಿಸಬೇಕು ಎಂದು ಯಡಿಯೂರಪ್ಪ ಅರ್ಜಿಯಲ್ಲಿ ಸರ್ಕಾರದ ಪರ ವಕೀಲರು ವಾದ ಮಂಡಿಸಿ ಅರ್ಜಿದಾರರು ನ್ಯಾಯಾಲಯದ ವ್ಯಾಪ್ತಿಯನ್ನು ಬಿಟ್ಟು ಹೋಗಬಾರದು ಎಂಬುದಾಗಿ ನ್ಯಾಯಾಲಯ ಷರತ್ತು ವಿಧಿಸಿದೆ.

ಆದರೆ, ಈ ಷರತ್ತನ್ನು ಈಗಾಗಲೇ ಅರ್ಜಿದಾರರು ಉಲ್ಲಂಘಿಸಿದ್ದಾರೆ. ಅಲ್ಲದೆ, ಮಧ್ಯಂತರ ಅರ್ಜಿಗೆ ಸಂಬಂಧಿಸಿದಂತೆ ಆಕ್ಷೇಪಣೆ ಸಲ್ಲಿಸುವುದಕ್ಕೆ ಕಾಲಾವಕಾಶ ನೀಡಬೇಕು’ ಎಂದು ಕೋರಿದರು. ಈ ಅಂಶ ದಾಖಲಿಸಿಕೊಂಡ ಪೀಠ, ವಿಚಾರಣೆಯನ್ನು ಮಾ.24ಕ್ಕೆ ಮುಂದೂಡಿತು.