ನ್ಯೂಸ್

ಸುದೀಪ್​ ನಟನೆಯ ಪೋಸ್ಟರ್​, ಕಾರ್ಯಕ್ರಮಗಳಿಗೆ ತಡೆ ಒಡ್ಡುವಂತೆ ಮನವಿ; ಚುನಾವಣಾ ಆಯೋಗಕ್ಕೆ ಜೆಡಿಎಸ್​ ಪತ್ರ

ಬೆಂಗಳೂರು: ನಟ ಕಿಚ್ಚ ಸುದೀಪ್ ಬಿಜೆಪಿಯ ಸ್ಟಾರ್ ಪ್ರಚಾರಕರಾಗಿ ಗುರುತಿಸಿಕೊಂಡ ಕಾರಣದಿಂದಾಗಿ ರಾಜ್ಯದಲ್ಲಿ ಸಂಚಲನ ಸೃಷ್ಟಿಯಾಗಿದೆ. ಈ ಬಗ್ಗೆ ಅಭಿಮಾನಿಗಳಲ್ಲೂ ಪರ ಹಾಗೂ ವಿರೋಧ ಅಭಿಪ್ರಾಯಗಳು ವ್ಯಕ್ತವಾಗುತ್ತಿದೆ. ಈ ನಡುವೆ ನಟ ಕಿಚ್ಚ ಸುದೀಪ್​ ಬಿಜೆಪಿ ಪರ ಪ್ರಚಾರ ಮಾಡಬಾರದು ಎಂದು ಚುನಾವಣಾ ಆಯೋಗಕ್ಕೆ ಜೆಡಿಎಸ್ ಮನವಿ ಸಲ್ಲಿಸಿದೆ.

ಈ ಮನವಿಯನ್ನು ಜೆಡಿಎಸ್‌ ಕಾನೂನು ಘಟಕದಿಂದ ಮನವಿ ಸಲ್ಲಿಸಲಾಗಿದೆ. ಚುನಾವಣೆ ಮುಗಿಯುವವರೆಗೆ ಸುದೀಪ್ ನಟನೆಯ ಯಾವುದೇ ಶೋ ಮತ್ತು ಅವರ ಭಾವಚಿತ್ರವಿರುವ ಜಾಹೀರಾತುಗಳ ಪ್ರಸಾರಕ್ಕೆ ತಡೆ ಹಿಡಿಯಬೇಕು ಎಂದು ಮನವಿಯಲ್ಲಿ. ಉಲ್ಲೇಖಿಸಲಾಗಿದೆ.