ನ್ಯೂಸ್

ಕೋಲ್ಕತ್ತಾ ಅತ್ಯಾಚಾರ ಪ್ರಕರಣ: ಆರೋಪಿಗೆ ನಾರ್ಕೋಟೆಸ್ಟ್ ನಿರಾಕರಿಸಿದ ಕೋರ್ಟ್!

ಕೋಲ್ಕತ್ತಾ: ಆರ್ ಜಿ ಕಾರ್ ಮೆಡಿಕಲ್ ಕಾಲೇಜು ಆಸ್ಪತ್ರೆಯಲ್ಲಿ ಟ್ರೈನಿ ವೈದ್ಯೆ ಕೊಲೆ ಪ್ರಕರಣದಲ್ಲಿ ಮತ್ತೊಂದು ಮಹತ್ವದ ಬೆಳವಣಿಗೆ ನಡೆದಿದೆ. ಪ್ರಕರಣದ ಪ್ರಮುಖ ಆರೋಪಿ ಸಂಜಯ್ ರಾಯ್ ಗೆ ನಾರ್ಕೋ ಪರೀಕ್ಷೆ ನಡೆಸಲು ಕೋಲ್ಕತ್ತಾ ನ್ಯಾಯಾಲಯ ಸಿಬಿಐಗೆ ಅನುಮತಿ ನಿರಾಕರಿಸಿದೆ.

ಆರೋಪಿಗಳಿಂದ ಹೆಚ್ಚಿನ ಮಾಹಿತಿ ಪಡೆಯಲು ನಾರ್ಕೋಟೆಸ್ಟ್‌ಗೆ ಅವಕಾಶ ನೀಡುವಂತೆ ಸಿಬಿಐ ಈ ಹಿಂದೆ ಕೋಲ್ಕತ್ತಾ ನ್ಯಾಯಾಲಯಕ್ಕೆ ಮನವಿ ಮಾಡಿತ್ತು. ಶುಕ್ರವಾರ ಸೀಲ್ಡಾ ನ್ಯಾಯಾಲಯದಲ್ಲಿ ವಿಚಾರಣೆ ಸಂದರ್ಭದಲ್ಲಿ ನ್ಯಾಯಾಧೀಶರು ರಾಯ್ ಅವರನ್ನು ನೇರವಾಗಿ ನಾರ್ಕೋ ಪರೀಕ್ಷೆಗೆ ಆಕ್ಷೇಪಣೆ ಇದೆಯೇ ಎಂದು ಕೇಳಿದರು. ಆದರೆ ರಾಯ್ ಒಪ್ಪಿಗೆ ನೀಡಲು ನಿರಾಕರಿಸಿದ ಎನ್ನಲಾಗಿದೆ.

ಈ ಮಧ್ಯೆ, ಪ್ರಕರಣದ ತನಿಖೆಯ ಭಾಗವಾಗಿ ಸಿಬಿಐ ಫೋರೆನ್ಸಿಕ್ ಸಾಕ್ಷ್ಯಗಳ ಮೇಲೆ ಕೇಂದ್ರೀಕರಿಸಿದೆ. ಸಂತ್ರಸ್ತೆ ದೇಹದ ಮೇಲೆ ಕಚ್ಚಿದ ಗುರುತುಗಳು ಕಂಡುಬಂದಿವೆ. ಅವುಗಳನ್ನು ಹೋಲಿಸಲು ಸಿಬಿಐ ಸಂಜಯ್ ರಾಯ್ ನ ಹಲ್ಲಿನ ಗುರುತುಗಳು ಮತ್ತು ಲಾಲಾರಸದ ಮಾದರಿ ಸಂಗ್ರಹಿಸಿ ಕೇಂದ್ರೀಯ ವಿಧಿ ವಿಜ್ಞಾನ ಪ್ರಯೋಗಾಲಯಕ್ಕರ ಕಳೂಹಿಸಿದೆ.

ಆರ್ ಡಿ ಕಾರ್ ಮೆಡಿಕಲ್ ಕಾಲೇಜಿನ ಸೆಮಿನಾರ್ ಹಾಲ್ ನಲ್ಲಿ ಟ್ರೈನಿ ವೈದ್ಯೆ ಶವ ಪತ್ತೆಯಾಗಿದ್ದು, ವೈದ್ಯಕೀಯ ಪರೀಕ್ಷೆಯಲ್ಲಿ ಆಕೆ ಮೇಲೆ ಅತ್ಯಾಚಾರ ನಡೆದಿರುವುದು ಪತ್ತೆಯಾಗಿತ್ತು. ಮರುದಿನವೇ ಸಂಜಯ್ ರಾಯ್ ನನ್ನು ಪೊಲೀಸರು ಬಂಧಿಸಿದ್ದರು. ಅಂದಿನಿಂದ ಕೋಲ್ಕತ್ತಾ ಪ್ರೆಸಿಡೆನ್ಸಿ ಜೈಲಿನಲ್ಲಿ ರಾಯ್ ನ್ಯಾಯಾಂಗ ಬಂಧನದಲ್ಲಿದ್ದರು. ಕಳೆದ ವಾರ ನ್ಯಾಯಾಲಯ ಅವರ ಜಾಮೀನು ಅರ್ಜಿಯನ್ನು ತಿರಸ್ಕರಿಸಿತ್ತು. ಅವರ ನ್ಯಾಯಾಂಗ ಬಂಧನವನ್ನು ಸೆಪ್ಟೆಂಬರ್ 20ರವರೆಗೆ ವಿಸ್ತರಿಸಲಾಗಿದೆ.