Tejashwi Yadav: ನಾವು ಮುಂಬರುವ ಬಿಹಾರ ವಿಧಾನಸಭಾ ಚುನಾವಣೆಯಲ್ಲಿ ಮುಖ್ಯಮಂತ್ರಿ ಅಭ್ಯರ್ಥಿಯನ್ನು ಘೋಷಿಸದೆ ಮಹಾಮೈತ್ರಿಕೂಟ ಸ್ಪರ್ಧಿಸುವುದಿಲ್ಲ ಎಂದು ಆರ್‌ಜೆಡಿ ನಾಯಕ ತೇಜಸ್ವಿ ಯಾದವ್ ಸ್ಪಷ್ಟಪಡಿಸಿದ್ದಾರೆ.
ಈ ಬಗ್ಗೆ ಸಂದರ್ಶನವೊಂದರಲ್ಲಿ ಮಾತನಾಡಿದ ಯಾದವ್, ನಮಗೆ ಯಾವುದೇ ಮುಖಗಳಿಲ್ಲದ ಬಿಜೆಪಿಯೇ ನಾವು? ಸಿಎಂ ಸ್ಥಾನದ ಮುಖವನ್ನು ತೋರಿಸದೆ ನಾವು ಖಂಡಿತವಾಗಿಯೂ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ ಎಂದು ಹೇಳಿದ್ದಾರೆ.
ಅಲ್ಲದೆ, ಸ್ವಲ್ಪ ಕಾಯಿರಿ. ಬಿಹಾರದ ಮುಖ್ಯಮಂತ್ರಿಯನ್ನು ಜನರು ನಿರ್ಧರಿಸುತ್ತಾರೆ. ಆದರೆ, ನಾವು ಸರ್ಕಾರ ನಿರ್ಮಿಸುವುದು ಮುಖ್ಯ ವಿಷಯವಲ್ಲ. ನಾವು ಬಿಹಾರವನ್ನು ನಿರ್ಮಿಸಬೇಕು ಎಂದುಯಾದವ್ ತಿಳಿಸಿದ್ದಾರೆ. ಅಲ್ಲದೆ, ಮುಂದಿನ ಐದು ಅಥವಾ 10 ದಿನಗಳ ವಿಳಂಬವಾದರೂ ಯಾವುದೇ ವ್ಯತ್ಯಾಸವಿಲ್ಲ. ಮೈತ್ರಿ ಪಾಲುದಾರರಲ್ಲಿ ಸೀಟು ಹಂಚಿಕೆ ವ್ಯವಸ್ಥೆಗಳ ತೀರ್ಮಾನದ ನಂತರ ನಾಯಕತ್ವದ ನಿರ್ಧಾರ ತೆಗೆದುಕೊಳ್ಳಲಾಗುತ್ತದೆ ಎಂದು ತೇಜಸ್ವಿ ಯಾದವ್ ಸೂಚಿಸಿದ್ದಾರೆ.
ಇದನ್ನೂ ಓದಿ: ಜಮ್ಮು-ಕಾಶ್ಮೀರದ ಉದಂಪುರದಲ್ಲಿ ಭದ್ರತಾ ಪಡೆಗಳು-ಉಗ್ರರ ನಡುವೆ ಗುಂಡಿನ ಚಕಮಕಿ; ಓರ್ವ ಯೋಧ ಹುತಾತ್ಮ| Soldier martyred
ಬಿಹಾರ ಚುನಾವಣೆ ಬಗ್ಗೆ ಮಾತನಾಡಿದ ತೇಜಸ್ವಿ, ಮೈತ್ರಿಕೂಟವು ಸಿಎಂ ಅಭ್ಯರ್ಥಿಯಿಲ್ಲದೆ ಚುನಾವಣೆಗೆ ಹೋಗುವುದಿಲ್ಲ. ನಮ್ಮ ಮತ್ತು ಕಾಂಗ್ರೆಸ್ ನಡುವೆ ಸೀಟು ಹಂಚಿಕೆ ಮುಗಿದ ನಂತರ, ಈ ಸಮಸ್ಯೆಯನ್ನು ಸಹ ಪರಿಹರಿಸಲಾಗುವುದು. ಬಿಹಾರದಲ್ಲಿ ಮತದಾನ ಪ್ರಾರಂಭವಾಗುವ ಮೊದಲು ಮುಖ್ಯಮಂತ್ರಿ ಅಭ್ಯರ್ಥಿಯನ್ನು ಹೆಸರಿಸಲಾಗುವುದು ಎಂದು ಯಾದವ್ ತಿಳಿಸಿದ್ದಾರೆ.
ಬಿಹಾರದಲ್ಲಿ ಇನ್ನೂ ಸಿಎಂ ಸ್ಥಾನ ಯಾವ ಪಾಲಗುತ್ತದೆ ಎನ್ನುವ ಪ್ರಶ್ನೆಗೆ ಇನ್ನೂ ಉತ್ತರ ಸಿಕ್ಕಿಲ್ಲ. ರಾಹುಲ್ ಗಾಂಧಿ ಬೆಂಬಲವು ಮೈತ್ರಿಕೂಟದ ಪಾಲುದಾರರಲ್ಲಿ ಕೆಲವು ಅಸಮಾಧಾನವನ್ನು ಉಂಟುಮಾಡಿದ್ದರೂ, ಗಾಂಧಿ ಸ್ವತಃ ಯಾದವ್ರನ್ನು ಮೈತ್ರಿಕೂಟದ ಮುಖ್ಯಮಂತ್ರಿ ಅಭ್ಯರ್ಥಿ ಎಂದು ಹೆಸರಿಸುವುದನ್ನು ತಪ್ಪಿಸಿದ್ದಾರೆ. (ಏಜೆನ್ಸೀಸ್)