ನ್ಯೂಸ್

ಸೇವಾ ಮನೋಭಾವ ಮೂಡಿಸಲು ಪಾತ್ರ

ಕಿರುವಾರ ಎಸ್.ಸುದರ್ಶನ್

ಕೋಲಾರ: ವಿದ್ಯಾರ್ಥಿಗಳಲ್ಲಿ ಸೇವಾ ಮನೋಭಾವ ಮೂಡಿಸುವಲ್ಲಿ ಸ್ಕೌಟ್ಸ್ ಮತ್ತು ಗೈಡ್ ಸಂಸ್ಥೆಯು ಪ್ರಮುಖ ಪಾತ್ರವಹಿಸುತ್ತಿದೆ. ಮಕ್ಕಳಲ್ಲಿ ಅಡಗಿರುವ ಪ್ರತಿಭೆಯನ್ನು ಪ್ರದರ್ಶಿಸಿದಾಗ ಸಮಾಜದಲ್ಲಿ ಗುರುತಿಸಿಕೊಳ್ಳಲು ಸಾಧ್ಯ ಎಂದು ಸಂಸ್ಥೆಯ ಜಿಲ್ಲಾ ಮುಖ್ಯ ಆಯುಕ್ತ ಕೆ.ವಿ.ಶಂಕರಪ್ಪ ಹೇಳಿದರು.

ನಗರದ ಸ್ಕೌಟ್ ಭವನದಲ್ಲಿ ಇತ್ತೀಚಿಗೆ ಆಯೋಜಿಸಿದ್ದ ಜಿಲ್ಲಾ ಮಟ್ಟದ ದೇಶಭಕ್ತಿಗೀತೆಗಳ ಗಾಯನ ಸ್ಪರ್ಧೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಪಾಲಕರು ಮಕ್ಕಳನ್ನು ಕೇವಲ ಅಂಕಗಳಿಗೆ ಮಾತ್ರ ಸೀಮಿತಗೊಳಿಸಬೇಡಿ, ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಲು ಪ್ರೋತ್ಸಾಹ ನೀಡಬೇಕು ಎಂದರು.
ಸ್ಕೌಟ್ಸ್-ಗೈಡ್ಸ್ ಸಂಸ್ಥೆಯಿಂದ ಶಿಬಿರಗಳನ್ನು ಆಯೋಜಿಸುವ ಮೂಲಕ ಜೀವನದ ಮೌಲ್ಯಗಳ ಬಗ್ಗೆ ಅರಿವು ಮೂಡಿಸಲಾಗುತ್ತಿದೆ. ವಿದ್ಯಾರ್ಥಿಗಳಲ್ಲಿ ಅಡಗಿರುವ ವಿಶೇಷ ಹವ್ಯಾಸ, ಅಭಿರುಚಿ, ಸಹಭಾಳ್ವೆ, ನಾಯಕತ್ವ, ಸಹೋದರೆ ಮೊದಲಾದ ಗುಣಗಳು ಹೊರಚೆಲ್ಲಲು ಅವಕಾಶ ಸಿಗಲಿದೆ ಎಂದರು.
ಸಮಾಜಸೇವಕ ಸಿಎಂಆರ್ ಶ್ರೀನಾಥ್ ಮಾತನಾಡಿ, ಸ್ಕೌಟ್ಸ್ ಗೈಡ್ಸ್ ಚಟುವಟಿಕೆಗಳು ವಿದ್ಯಾರ್ಥಿಗಳಲ್ಲಿ ಬದಲಾವಣೆಗಳನ್ನು ತರುತ್ತದೆ ಎಂದು ಹೇಳಿದರು.
ಶಿಸ್ತು ಮತ್ತು ಸಂಯಮಕ್ಕೆ ಹೆಸರಾದ ಸಂಸ್ಥೆ ಸ್ಕೌಟ್, ಸ್ವಚ್ಛತೆ, ಹಸುರೀಕರಣಕ್ಕೆ ಹೆಚ್ಚು ಒತ್ತು ಕೊಟ್ಟು ಪರಿಸರ ರಕ್ಷಣೆಗೆ ಕಾಳಜಿ ಮೂಡಿಸುತ್ತಿರುವುದು ಶ್ಲಾಘನೀಯ ಕಾರ‍್ಯ ಎಂದರು.

ಧರ್ಮಸ್ಥಳ ಕ್ಷೇಮಾಭಿವೃದ್ಧಿ ಯೋಜನೆಯ ತಾಲೂಕು ಯೋಜನಾಧಿಕಾರಿ ಸಿದ್ದಗಂಗಯ್ಯ ಮಾತನಾಡಿ, ಪ್ಲಾಸ್ಟಿಕ್ ಮುಕ್ತ ನಗರವಾಗಿ ಮಾಡಲು ಎಲ್ಲರೂ ಕೈಜೋಡಿಸಬೇಕು. ನಾವು ಅಂಗಡಿಗೆ ಹೋಗುವಾಗ ಮನೆಯಿಂದ ಬಟ್ಟೆಯ ಕೈ ಚೀಲವನ್ನು ತೆಗೆದುಕೊಂಡು ಹೋಗುವ ಹವ್ಯಾಸ ರೂಢಿಸಿಕೊಳ್ಳಬೇಕು ಎಂದರು.

ಜಿಲ್ಲಾ ಮಟ್ಟದ ಸ್ಪರ್ಧೆಯಲ್ಲಿ ಚಿನ್ಮಯಿ ಶಾಲೆಯ ಕಬ್ ಮತ್ತು ಬುಲ್‌ಬುಲ್ ತಂಡ, ಸ್ಕೌಟ್ ವಿಭಾಗದಲ್ಲಿ ಮಾಲೂರು ಜೆಎಸ್‌ಎಸ್, ಗೈಡ್ ವಿಭಾಗದಲ್ಲಿ ಸೋಮಯಾಜಲಹಳ್ಳಿ ಕೆಪಿಎಸ್ ಶಾಲೆ, ರೇಂಜರ್ ವಿಭಾಗದಲ್ಲಿ ಶ್ರೀನಿವಾಸಪುರ ರ‍್ಕಾರಿ ಪದವಿ ಪರ‍್ವ ಕಾಲೇಜು, ರೋವರ್ ವಿಭಾಗದಲ್ಲಿ ಮಾಲೂರು ರ‍್ಕಾರಿ ಪ್ರಥಮ ರ‍್ಜೇ ಕಾಲೇಜು ತಂಡ ಪ್ರಥಮ ಸ್ಥಾನ ಪಡೆದು ರಾಜ್ಯಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ.