ನ್ಯೂಸ್

ರೌಡಿಶೀಟರ್​ ಬಗಲಗುಂಟೆ ಸಿದ್ದನ ಮೇಲೆ ಪೊಲೀಸರಿಂದ ಗುಂಡಿನ ದಾಳಿ

kumarvrl

ಬೆಂಗಳೂರು: ಕುಖ್ಯಾತ ರೌಡಿ ಶೀಟರ್​ ಸಿದ್ದ ಅಲಿಯಾಸ್​ ಬಗಲಗುಂಟೆ ಸಿದ್ದನ ಮೇಲೆ ಪೊಲೀಸರು ಗುಂಡು ಹಾರಿಸಿ ಬಂಧಿಸಿದ್ದಾರೆ.

ಬ್ಯಾಡರಹಳ್ಳಿಯ ಆಶ್ರಯ ಬಡಾವಣೆಯಲ್ಲಿ ನಡೆದ ಗುಂಡಿನ ದಾಳಿಯಲ್ಲಿ ಸಿದ್ದನ ಕಾಲಿಗೆ ಗುಂಡು ತಗುಲಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ.

ನಗರದ ವಿವಿಧ ಠಾಣೆಗಳಲ್ಲಿ ಈತನ ವಿರುದ್ಧ 15ಕ್ಕೂ ಅಧಿಕ ಕೇಸುಗಳು ದಾಖಲಾಗಿದ್ದವು. ಹೀಗಾಗಿ ಈತನ ಪತ್ತೆಗೆ ಪೊಲೀಸರು ಬಲೆ ಬೀಸಿದ್ದರು. ಈತ ಬ್ಯಾಡರಹಳ್ಳಿಯ ಆಶ್ರಯ ಬಡಾವಣೆಯಲ್ಲಿ ಅಡಗಿರುವುದನ್ನು ಪತ್ತೆ ಹಚ್ಚಿದ ಪೊಲೀಸರು ಬಂಧನಕ್ಕೆ ತೆರಳಿದರು.

ರೌಡಿ ಸಿದ್ದ ಬಂಧನಕ್ಕೆ ಮುಂದಾದ ಪೊಲೀಸರ ಮೇಲೆ ಹಲ್ಲೆ ನಡೆಸಲು ಮುಂದಾದ. ಬ್ಯಾಡರಹಳ್ಳಿ ಠಾಣೆ ಪೇದೆ ಹನುಮಂತರಾಜು ಮೇಲೆ ಹಲ್ಲೆ ನಡೆಸಿ ತಪ್ಪಿಕೊಂಡು ಪರಾರಿಯಾಗಲು ಮುಂದಾದ. ಈ ವೇಳೆ ಆತ್ಮರಕ್ಷಣೆಗಾಗಿ ಇನ್ಸ್​ಪೆಕ್ಟರ್​ ರಾಜೀವ್​ ಸೇವಾ ರಿವಾಲ್ವರ್​ನಿಂದ ಬಲಗಾಲಿಗೆ ಗುಂಡು ಹಾರಿಸಿದರು. ಗುಂಡು ತಗುಲಿ ಆತ ಸ್ಥಳದಲ್ಲೇ ಕುಸಿದು ಬಿದ್ದ. ಕೂಡಲೇ ಆತನನ್ನು ಚಿಕಿತ್ಸೆಗೆ ಆಸ್ಪತ್ರೆಗೆ ದಾಖಲಿಸಿದರು. (ದಿಗ್ವಿಜಯ ನ್ಯೂಸ್​)