ನ್ಯೂಸ್

ಮೀನುಗಾರರ ಸಾಲ ಮನ್ನಾಕ್ಕೆ 60 ಕೋಟಿ ರೂ. ಬಿಡುಗಡೆ ಮಾಡಿದ ಹಣಕಾಸು ಇಲಾಖೆ; 23 ಸಾವಿರ ಮೀನುಗಾರರಿಗೆ ಅನುಕೂಲ

ಮಂಗಳೂರು: ರಾಜ್ಯ ಸರ್ಕಾರ ಘೋಷಿಸಿರುವಂತೆ ಮೀನುಗಾರರ ಸಾಲ ಮನ್ನಾ ಮಾಡಲು ಹಣಕಾಸು ಇಲಾಖೆ 60 ಸಾವಿರ ಕೋಟಿ ರೂ. ಬಿಡುಗಡೆ ಮಾಡಿದೆ. ಇದರಿಂದ 23 ಸಾವಿರ ಮೀನುಗಾರರಿಗೆ ಅನುಕೂಲವಾಗಲಿದೆ ಎಂದು ಮೀನುಗಾರಿಕಾ ಸಚಿವ ಕೋಟಾ ಶ್ರೀನಿವಾಸ ಪೂಜಾರಿ ಮಾಹಿತಿ ನೀಡಿದ್ದಾರೆ.

ಈ ಬಗ್ಗೆ ಶುಕ್ರವಾರ ಹೇಳಿಕೆ ಬಿಡುಗಡೆ ಮಾಡಿರುವ ಅವರು, 60 ಕೋಟಿ ರೂ. ಬಿಡುಗಡೆಗೆ ಆದೇಶ ಜಾರಿಯಾಗಿದೆ. ಭೂಮಿ ಕೋಶದ ಮೂಲಕ ಸಾಲಗಾರರ ಖಾತೆಗೆ ಸಾಲ ಮನ್ನಾ ಹಣ ಜಮೆಯಾಗಲಿದೆ ಎಂದು ಹೇಳಿದ್ದಾರೆ.

ಕರೊನಾ ಸಂಕಷ್ಟದ ಸಮಯದಲ್ಲಿ ಮೀನುಗಾರರ ಸಹಾಯಕ್ಕೆ ಮುಂದಾಗಿದ್ದಕ್ಕಾಗಿ ಸಿಎಂ ಬಿ.ಎಸ್​. ಯಡಿಯೂರಪ್ಪ ಅವರಿಗೆ ಸಚಿವರು ಕೃತಜ್ಞತೆ ಅರ್ಪಿಸಿದ್ದಾರೆ.