ನ್ಯೂಸ್

ಚಲಿಸುತ್ತಿರುವಾಗಲೇ ಧಗಧಗನೆ ಹೊತ್ತಿ ಉರಿದ ಶತಾಬ್ದಿ ಎಕ್ಸ್​ಪ್ರೆಸ್ ರೈಲಿನ ಬೋಗಿಗಳು!

ನವದೆಹಲಿ: ಶತಾಬ್ದಿ ಎಕ್ಸ್​ಪ್ರೆಸ್ ರೈಲಿನ ಬೋಗಿಗಳಲ್ಲಿ ಅಗ್ನಿ ಕಾಣಿಸಿಕೊಂಡು ಇಡೀ ಬೋಗಿಗಳು ಧಗಧಗನೆ ಹೊತ್ತಿ ಉರಿದ ಘಟನೆ ಉತ್ತರಾಖಂಡದ ಕನಸೂರ್​ ಬಳಿ ನಡೆದಿದೆ.

ದೆಹಲಿ-ಡೆಹ್ರಾಡೂನ್ ರೈಲಿನ ಸಿ4 ಬೋಗಿ ಇದಾಗಿದೆ. ರೈಲು ಚಲಿಸುತ್ತಿದ್ದ ಸಂದರ್ಭದಲ್ಲಿಯೇ ಈ ಅವಘಡ ಸಂಭವಿಸಿದೆ. ಆದರೆ ಅದೃಷ್ಟವಶಾತ್​ ಯಾರಿಗೂ ಏನೂ ಅನಾಹುತವಾಗಿಲ್ಲ ಎಂದು ರೈಲ್ವೆ ಇಲಾಖೆ ಹೇಳಿದೆ.

ಕನಸೂರ್​ ಬಳಿ ರೈಲು ಬರುತ್ತಿದ್ದಂತೆಯೇ ಹಲವು ಬೋಗಿಗಳಲ್ಲಿ ಬೆಂಕಿ ಕಾಣಿಸಿಕೊಂಡಿವೆ. ಷಾರ್ಟ್ ಸರ್ಕ್ಯೂಟ್​ನಿಂದಾಗಿ ಈ ಘಟನೆ ಸಂಭವಿಸಿದೆ. ಕೂಡಲೇ ತುರ್ತು ಕ್ರಮ ತೆಗೆದುಕೊಂಡ ಹಿನ್ನೆಲೆಯಲ್ಲಿ ಯಾವುದೇ ಅವಘಡಗಳು ಸಂಭವಿಸಿಲ್ಲ ಎಂದು ಉತ್ತರಾಖಂಡ ಡಿಜಿಪಿ ಅಶೋಕ್ ಕುಮಾರ್ ಹೇಳಿದ್ದಾರೆ.

ರೈಲಿಯಲ್ಲಿದ್ದ ಎಲ್ಲ ಪ್ರಯಾಣಿಕರನ್ನ ಸುರಕ್ಷಿತವಾಗಿ ಸ್ಥಳಾಂತರಿಸಲಾಗಿದ್ದು, ಯಾವುದೇ ಗಾಯಗಳಾಗಿಲ್ಲ. ಬೆಂಕಿಯನ್ನು ನಿಯಂತ್ರಣಕ್ಕೆ ತರಲಾಗಿದೆ ಎಂದು ಅವರು ಹೇಳಿದ್ದಾರೆ.