ನ್ಯೂಸ್

ನಿಂತಿದ್ದ ಟ್ರಕ್​ಗೆ ಬಸ್​ ಡಿಕ್ಕಿ: ಬೆಳ್ಳಂಬೆಳಗ್ಗೆ ಭೀಕರ ಅಪಘಾತಕ್ಕೆ ಏಳು ಮಂದಿ ಬಲಿ- ಹಲವರಿಗೆ ಗಾಯ

ಕೊರ್ಬಾ (ಛತ್ತೀಸ್‌ಗಢ): ನಿಂತಿದ್ದ ಟ್ರಕ್‌ಗೆ ಬಸ್ಸೊಂದು ಡಿಕ್ಕಿ ಹೊಡೆದ ಪರಿಣಾಮ ಏಳು ಜನರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಛತ್ತೀಸ್‌ಗಢದ ಕೊರ್ಬಾ ಜಿಲ್ಲೆಯಲ್ಲಿ ನಡೆದಿದೆ. ಇಲ್ಲಿನ ಪಾಂಡಿ ಉಪೋರ್ಡಾ ರಾಷ್ಟ್ರೀಯ ಹೆದ್ದಾರಿ 130ರಲ್ಲಿ ನಸುಕಿನ ನಾಲ್ಕು ಗಂಟೆಯ ಸಮಯದಲ್ಲಿ ಅಪಘಾತ ಸಂಭವಿಸಿದೆ. ಘಟನೆಯಲ್ಲಿ ಹಲವರು ಗಾಯಗೊಂಡಿದ್ದು, ಮೂವರ ಸ್ಥಿತಿ ಗಂಭೀರವಾಗಿದೆ ಎನ್ನಲಾಗಿದೆ.

ಚಲಿಸುತ್ತಿದ್ದ ಬಸ್ ನಿಯಂತ್ರಣ ಕಳೆದುಕೊಂಡು ರಸ್ತೆ ಪಕ್ಕದಲ್ಲಿ ನಿಂತಿದ್ದ ಲಾರಿಗೆ ಡಿಕ್ಕಿ ಹೊಡೆದಿದೆ. ಬಸ್ ಕೊರ್ಬಾದಿಂದ ರಾಯಪುರಕ್ಕೆ ಹೋಗುತ್ತಿತ್ತು ಎಂದು ಕೊರ್ಬಾದ ಪೊಲೀಸ್ ಅಧೀಕ್ಷಕ ಸಂತೋಷ್ ಸಿಂಗ್ ಹೇಳಿದ್ದಾರೆ. ಬಸ್ ಚಾಲಕ ಎದುರಿನಿಂದ ಬರುತ್ತಿದ್ದ ಕಾರಿಗೆ ಡಿಕ್ಕಿ ಹೊಡೆಯುವುದನ್ನು ತಪ್ಪಿಸಲು ಯತ್ನಿಸಿ ಟ್ರಕ್‌ಗೆ ಡಿಕ್ಕಿ ಹೊಡೆದಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

ಘಟನೆಯ ಬಗ್ಗೆ ಛತ್ತೀಸ್‌ಗಢ ಮುಖ್ಯಮಂತ್ರಿ ಭೂಪೇಶ್ ಬಘೇಲ್ ದುಃಖ ವ್ಯಕ್ತಪಡಿಸಿದ್ದಾರೆ ಮತ್ತು ಗಾಯಾಳುಗಳಿಗೆ ಚಿಕಿತ್ಸೆ ನೀಡಲು ಅಧಿಕಾರಿಗಳಿಗೆ ಸೂಚಿಸಿದ್ದಾರೆ. (ಏಜೆನ್ಸೀಸ್​)