ನ್ಯೂಸ್

ಅಫ್ಘಾನಿಸ್ತಾನದಲ್ಲಿ ಗಾಯದ ಮೇಲೆ ಬರೆ- ತಾಲಿಬಾನಿಗಳು ಹೆಜ್ಜೆ ಇಡುತ್ತಲೇ ಭೂಕಂಪ: ಆತಂಕದಲ್ಲಿ ಜನತೆ

ಕಾಬುಲ್​: ತಾಲಿಬಾನ್ ದಾಳಿಯಿಂದ ತತ್ತರಿಸಿರುವ ಅಪ್ಘಾನಿಸ್ತಾನಕ್ಕೆ ಗಾಯದ ಮೇಲೆ ಬರೆ ಎನ್ನುವಂತೆ ಮತ್ತೊಂದು ಆಘಾತ ಉಂಟಾಗಿದೆ. ಅದೇನೆಂದರೆ ಅಪ್ಘಾನಿಸ್ತಾನದಲ್ಲಿ ಇಂದು ಮುಂಜಾನೆ ಭೂಮಿ ಕಂಪಿಸಿದೆ.

ಉಗ್ರರ ಹಿಡಿತಕ್ಕೆ ಸಿಲುಕಿದಾಗಲೇ ನಿನ್ನೆ ಆಫ್ಘಾನಿಸ್ತಾನದ ಸೇನಾ ವಿಮಾನ ಪತನವಾಗಿತ್ತು. ಇಂದು ಬೆಳಗಿನ ಜಾವ ಆಫ್ಘಾನಿಸ್ತಾನದ ಫೈಜಾಬಾದ್ ಆಗ್ನೇಯ ಪ್ರದೇಶದಲ್ಲಿ 5.5 ತೀವ್ರತೆಯ ಭೂಕಂಪ ಸಂಭವಿಸಿದೆ.

ಬೆಳಗ್ಗೆ 6.08ಕ್ಕೆ ಭೂಮಿ ಕಂಪಿಸಿದ್ದು, ಜನರು ಭಯಭೀತರಾಗಿದ್ದಾರೆ ಎಂದು ನ್ಯಾಷನಲ್ ಸೆಂಟರ್ ಫಾರ್ ಸೀಸ್ಮೊಲಾಜಿ ವರದಿ ತಿಳಿಸಿದೆ. ಇದಕ್ಕೂ ಮೊದಲು ಅಂದರೆ ಆಗಸ್ಟ್ 15 ರಂದೇ ಆಫ್ಘಾನಿಸ್ತಾನ ಮತ್ತು ಕಜಕಿಸ್ತಾನ ಭಾಗದಲ್ಲಿ 5.1 ತೀವ್ರತೆಯ ಭೂಕಂಪ ಸಂಭವಿಸಿತ್ತು. ಹೀಗೆ ಪದೇ ಪದೇ ಭೂಕಂಪನ ಉಂಟಾಗುತ್ತಿರುವುದರಿಂದ ಜನ ಜೀವನ ಅಲ್ಲೋಲಕಲ್ಲೋಲವಾಗಿದೆ.