ಮುಂಬೈ: ಬಾಲಿವುಡ್ ನಟಿ ಆಲಿಯಾ ಭಟ್ ಅವರಿಗೆ ಕರೊನಾ ಸೋಂಕು ತಗುಲಿದೆ. ಪರೀಕ್ಷೆ ಮಾಡಿಸಿಕೊಂಡಾಗ ತಮಗೆ ಕರೊನಾ ಪಾಸಿಟಿವ್ ಇರುವುದು ದೃಢಪಟ್ಟಿದೆ ಎಂದು ನಟಿ ಖುದ್ದು ಹೇಳಿಕೊಂಡಿದ್ದಾರೆ.
ಈ ಕುರಿತು ತಮ್ಮ ಇನ್ಸ್ಟಾಗ್ರಾಂ ಖಾತೆಯಲ್ಲಿ ಆಲಿಯಾ ಮಾಹಿತಿ ಹಂಚಿಕೊಂಡಿದ್ದಾರೆ. ಕರೊನಾ ಸೋಂಕು ಹೆಚ್ಚಿದ ಹಿನ್ನೆಲೆಯಲ್ಲಿ ಕಳೆದ ಮಾರ್ಚ್ 11 ರಂದು ಆಲಿಯಾ ಭಟ್ ಪರೀಕ್ಷೆ ಮಾಡಿಸಿಕೊಂಡಿದ್ದರು. ಆದರೆ ಅವರಿಗೆ ನೆಗೆಟಿವ್ ಕಂಡುಬಂದಿತ್ತು.
ಇದಾದ ಬೆನ್ನಲ್ಲೇ ಅವರ ಬಾಯ್ ಫ್ರೆಂಡ್ ರಣಬೀರ್ ಕಫೂರ್ ಮತ್ತು ನಿರ್ಮಾಪಕ ಸಂಜಯ್ ಲೀಲಾ ಬನ್ಸಾಲಿ ಅವರಿಗೆ ಕರೊನಾ ಪಾಸಿಟಿವ್ ಕಾಣಿಸಿಕೊಂಡಿತ್ತು. ಈ ಸಮಯದಲ್ಲಿ ಇವರ ಜತೆ ಆಲಿಯಾ ಗಂಗೂಬಾಯಿ ಕಥೈವಾಡಿ ಚಿತ್ರೀಕರಣದಲ್ಲಿ ತೊಡಗಿಸಿಕೊಂಡಿದ್ದರು. ಈ ಹಿನ್ನೆಲೆಯಲ್ಲಿ ಇದೀಗ ಪುನಃ ಪರೀಕ್ಷೆ ಮಾಡಿಸಿಕೊಂಡಾಗ ಕರೊನಾ ಪಾಸಿಟಿವ್ ಬಂದಿದೆ.
ತಮಗೆ ಕೊರೊನಾ ಪಾಸಿಟಿವ್ ಬಂದಿದ್ದು, ವೈದ್ಯರ ಸಲಹೆ ಮೇರೆಗೆ ಹೋಮ್ ಐಸೋಲೇಷನ್ ನಲ್ಲಿದ್ದೇನೆ. ಕರೊನಾ ಕುರಿತು ಎಲ್ಲಾ ಸುರಕ್ಷತಾ ಕ್ರಮಗಳನ್ನು ಅನುಸರಿಸಿ ಎಂದು ಹೇಳಿದ್ದಾರೆ. ಈ ನಡುವೆ ರಣಬೀರ್ ಕಪೂರ್ ಹಾಗೂ ಸಂಜಯ್ ಲೀಲಾ ಬನ್ಸಾಲಿ ಚೇತರಿಸಿಕೊಂಡಿರುವುದಾಗಿ ವರದಿಗಳು ಹೇಳಿವೆ.