ನ್ಯೂಸ್

ಆತ್ಮಹತ್ಯೆಗೆ ಪ್ರಚೋದನೆ ಆರೋಪ: ಅರ್ನಬ್​ಗೆ ಹೈಕೋರ್ಟ್​ನಿಂದ ಸಿಕ್ಕಿಲ್ಲ ಜಾಮೀನು

suchetana

ಮುಂಬೈ: ಇಂಟೀರಿಯರ್ ಡಿಸೈನರ್ ಅನ್ವಯ್ ನಾಯಕ್​ ಮತ್ತು ಅವರ ತಾಯಿಯವರು 2018ರಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವ ಪ್ರಕರಣದಲ್ಲಿ ಆರೋಪಿಯಾಗಿರುವ ರಿಪಬ್ಲಿಕ್ ಟಿವಿ ಸಂಪಾದಕ ಅರ್ನಬ್ ಗೋಸ್ವಾಮಿ ಅವರಿಗೆ ಜಾಮೀನು ನೀಡಲು ಬಾಂಬೆ ಹೈಕೋರ್ಟ್​ ತಿರಸ್ಕರಿಸಿದೆ.

ನೇರವಾಗಿ ಹೈಕೋರ್ಟ್​ಗೆ ಬರುವ ಬದಲು, ಮೊದಲು ಸೆಷನ್ಸ್​ ಕೋರ್ಟ್​ಗೆ ಜಾಮೀನು ಕೋರಿ ಅರ್ಜಿ ಸಲ್ಲಿಸುವಂತೆ ಕೋರ್ಟ್​ ಆದೇಶಿಸಿದೆ ಹಾಗೂ ಈ ಅರ್ಜಿಯ ವಿಚಾರಣೆಯನ್ನು ನಾಲ್ಕು ದಿನಗಳಲ್ಲಿ ಮುಗಿಸುವಂತೆ ಸೆಷನ್ಸ್​ ಕೋರ್ಟ್​ಗೆ ಹೈಕೋರ್ಟ್​ ನ್ಯಾಯಮೂರ್ತಿಗಳು ನಿರ್ದೇಶಿಸಿದ್ದಾರೆ.

ರಿಪಬ್ಲಿಕ್ ಟಿವಿ ಸ್ಟುಡಿಯೋ ನಿರ್ಮಿಸುವಾಗ ಅನ್ವಯ್ ನಾಯಕ್ ಅವರೇ ಇಂಟೀರಿಯರ್ ಡಿಸೈನಿಂಗ್ ಮಾಡಿಕೊಟ್ಟಿದ್ದರು. ಅದರ ಹಣ ನೀಡದೆ ಸತಾಯಿಸಿದ್ದರಿಂದ ಅವರು ಆತ್ಮಹತ್ಯೆ ಮಾಡಿಕೊಂಡಿರುವ ಆರೋಪ ಅರ್ನಬ್ ಗೋಸ್ವಾಮಿ ವಿರುದ್ಧ ಕೇಳಿಬಂದಿದೆ.

ಈ ಪ್ರಕರಣದಲ್ಲಿ ಅಲಿಬೌಗ್‌ನ ಕೋರ್ಟ್ ಅರ್ನಬ್ ಗೋಸ್ವಾಮಿ ಮತ್ತು ಇತರ ಇಬ್ಬರನ್ನು ನವೆಂಬರ್ 18ರವರೆಗೆ ನ್ಯಾಯಾಂಗ ಬಂಧನಕ್ಕೊಪ್ಪಿಸಿದೆ.