ಮುಫಾಸಿಲ್ (ಜಾರ್ಖಂಡ್): ಗಂಡನೊಂದಿಗೆ ಮಾರ್ಕೆಟ್‌ನಿಂದ ಮನೆಗೆ ತೆರಳುತ್ತಿದ್ದ ಐದು ಮಕ್ಕಳ ತಾಯಿಯ ಮೇಲೆ 17 ಮಂದಿ ಸಾಮೂಹಿಕ ಅತ್ಯಾಚಾರವೆಸಗಿರುವ ಪ್ರಕರಣ ಜಾರ್ಖಂಡ್ನ ದುಮ್ಕಾದಲ್ಲಿ ನಡೆದಿದೆ.
ಪತಿಯ ಮೇಲೆ ಹಲ್ಲೆ ಮಾಡಿರುವ ಆರೋಪಿಗಳೆಲ್ಲರೂ ಈ ಕೃತ್ಯ ಎಸಗಿದ್ದಾರೆ. ಎಲ್ಲರೂ ಮದ್ಯಸೇವನೆ ಮಾಡಿದ್ದರೆನ್ನಲಾಗಿದೆ.
ಸಂತ್ರಸ್ತೆ ಪೊಲೀಸರಿಗೆ ದೂರು ನೀಡಿದ್ದಾರೆ. ರಾತ್ರಿ 8 ಗಂಟೆ ಸುಮಾರಿಗೆ ತಾವು ಪತಿಯೊಂದಿಗೆ ಮಾರ್ಕೆಟ್‌ನಿಂದ ಮನೆಗೆ ಮರಳುತ್ತಿದ್ದಾಗ 17 ಮಂದಿ ತಮ್ಮನ್ನು ಅಡ್ಡಗಟ್ಟಿದರು. ಎಲ್ಲರೂ ಕಂಠಪೂರ್ತಿ ಕುಡಿದ್ದರು. ಐವರು ತಮ್ಮನ್ನು ಪೊದೆಯತ್ತ ಎಳೆದೊಯ್ದರು. ಉಳಿದವರು ಗಂಡನ ಮೇಲೆ ಹಲ್ಲೆ ಮಾಡಿದರು. ಬಳಿಕ ಎಲ್ಲರೂ ಅತ್ಯಾಚಾರವೆಸಗಿದರು ಎಂದು ಹೇಳಿಕೆ ನೀಡಿದ್ದಾರೆ.
ಈ ವಿಚಾರ ತಿಳಿಯುತ್ತಿದ್ದಂತೆಯೇ ಪೊಲೀಸರು ಆರೋಪಿಗಳನ್ನು ಪತ್ತೆ ಹಚ್ಚಿ ಬಂಧಿಸಿದ್ದಾರೆ. ಇನ್ನು ಮಹಿಳೆಯನ್ನು ವೈದ್ಯಕೀಯ ಪರೀಕ್ಷೆಗೆ ಕಳುಹಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. . ಮುಫಾಸಿಲ್ ಪೊಲೀಸ್ ಠಾಣೆ ವ್ಯಾಪ್ತಿಗೆ ಒಳಪಡುವ ಪ್ರದೇಶದಲ್ಲಿ ಈ ಘಟನೆ ನಡೆದಿದ್ದು ಆರೋಪಿಗಳ ಮೇಲೆ ಎಫ್‍ಐಆರ್ ದಾಖಲಿಸಲಾಗಿದೆ.
ಬಿಜೆಪಿ ವಕ್ತಾರ ಪ್ರತುಲ್ ಶಾಹ್ದೋ ಅವರು ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಇದು ಪೈಶಾಚಿಕ ದುಷ್ಕೃತ್ಯವಾಗಿದೆ. ಕಾನೂನು ಸುವ್ಯವಸ್ಥೆ ಕುಸಿದಿದೆ ಎಂಬುದನ್ನು ಇದು ತೋರುತ್ತಿದೆ. ಆರೋಪಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸುತ್ತೇವೆ ಎಂದಿದ್ದಾರೆ.
ಯಾವುದೇ ಕಾರಣಕ್ಕೂ ತಪ್ಪಿತಸ್ಥರನ್ನು ಬಿಡುವುದಿಲ್ಲ ಎಂದು ಪೊಲೀಸರು ಹೇಳಿಕೆ ನೀಡಿದ್ದಾರೆ.