ಬೆಂಗಳೂರು : 2020-21ನೇ ಸಾಲಿನ ಎರಡು ವರ್ಷಗಳ ಬಿ.ಎಡ್ ಕೋರ್ಸ್ಗೆ ಸೇರಲು ಬಯಸುವವರಿಗೆ ಅರ್ಜಿ ಸಲ್ಲಿಸಲು ಈ ಮೊದಲು ನಿಗದಿ ಮಾಡಲಾಗಿದ್ದ ಅವಧಿಯನ್ನು ವಿಸ್ತರಣೆ ಮಾಡಲಾಗಿದೆ.
ಅಂತಿಮ ದಿನಾಂಕವನ್ನು ಜನವರಿ 31ರವರೆಗೆ ವಿಸ್ತರಣೆ ಮಾಡಿ ಸರ್ಕಾರ ಆದೇಶಿಸಿದ್ದು, ಈ ಮೂಲಕ ಕೋರ್ಸ್ ಸೇರಬಯಸುವವರಿಗೆ ಇನ್ನು ಮೂರು ದಿನಗಳ ಅವಕಾಶ ಕಲ್ಪಿಸಲಾಗಿದೆ.
ಈ ಕುರಿತು ಸಾರ್ವಜನಿಕ ಶಿಕ್ಷಣ ಇಲಾಖೆ ಸುತ್ತೋಲೆ ಹೊರಡಿಸಿದೆ.
2020-21ನೇ ಸಾಲಿಗೆ ಎರಡು ವರ್ಷದ ಬಿ.ಇಡಿ ಕೋರ್ಸಿನ ವ್ಯಾಸಂಗಕ್ಕಾಗಿ ರಾಜ್ಯ ಸರ್ಕಾರಿ, ಮಾನ್ಯ ಪಡೆದ ಅನುದಾನಿತ ಹಾಗೂ ಅನುದಾನರಹಿತ ಬಿ.ಇಡಿ ಕಾಲೇಜುಗಳಲ್ಲಿನ ಸರ್ಕಾರಿ ಕೋಟಾದ ಸೀಟುಗಳ ದಾಖಲಾತಿಗಾಗಿ ಆನ್ ಲೈನ್ ಮೂಲಕ ಅರ್ಜಿಗಳನ್ನು ಇಲಾಖೆಯ ವೆಬ್ ಸೈಟ್ ಮೂಲಕ ದಿನಾಂಕ 13-01-2021ರಿಂದ 26-01-2021ರವರೆಗೆ ಆಹ್ವಾನಿಸಲಾಗಿತ್ತು. ಆದರೆ ಈಗ ಅವಧಿಯನ್ನು 31ರವರೆಗೆ ವಿಸ್ತರಿಸಲಾಗಿದೆ ಎಂದು ಸುತ್ತೋಲೆಯಲ್ಲಿ ತಿಳಿಸಲಾಗಿದೆ.
ವೆಬ್ ಸೈಟ್ನಲ್ಲಿ ಪ್ರಕಟಿಸಲಾದ ಅಧಿಸೂಚನೆಯಲ್ಲಿ ಅರ್ಹತೆ, ಮೀಸಲಾತಿ, ಶುಲ್ಕ ಇತ್ಯಾದಿ ವಿವರಗಳನ್ನು ಅಭ್ಯರ್ಥಿಗಳು ಕಡ್ಡಾಯವಾಗಿ ಓದಿಕೊಂಡು, ಕ್ರಮಬದ್ಧವಾಗಿ ಭರ್ತಿ ಮಾಡಿ ಅರ್ಜಿ ಸಲ್ಲಿಸಲು ತಿಳಿಸಿದೆ. ಅಧಿಕೃತ ವೆಬ್ಸೈಟ್ http://www.schooleducation.kar.nic.in