ನ್ಯೂಸ್

ಪ್ರಧಾನಿ ರ‍್ಯಾಲಿಗೆ ತೆರಳುತ್ತಿದ್ದ ಬಸ್‌- ಕಾರಿನ ನಡುವೆ ಭೀಕರ ಅಪಘಾತ: ಒಂದೇ ಕುಟುಂಬದ ಮೂವರ ದುರ್ಮರಣ

suchetana

ಡೆಹ್ರಾಡೂನ್​ :ಪ್ರಧಾನಿ ಮೋದಿ ಅವರು ಉತ್ತರಾಖಂಡದ ಡೆಹ್ರಾಡೂನ್​ನಲ್ಲಿ ನಡೆಸುತ್ತಿರುವ ಬೃಹತ್​ ರ‍್ಯಾಲಿಯಲ್ಲಿ ಪಾಲ್ಗೊಳ್ಳಲು ಹೋಗುತ್ತಿದ್ದ ಬಸ್‌ ಮತ್ತು ಕಾರಿನ ನಡುವೆ ಅಪಘಾತ ಸಂಭವಿಸಿದ್ದು ಮೂವರು ದಾರುಣವಾಗಿ ಮೃತಪಟ್ಟಿದ್ದಾರೆ.

ಉತ್ತರಪ್ರದೇಶದಿಂದ ಬಿಜೆಪಿ ಕಾರ್ಯಕರ್ತರು ಖಾಸಗಿ ಬಸ್‌ನಲ್ಲಿ ತೆರಳುತ್ತಿದ್ದರು. ಈ ಸಂದರ್ಭದಲ್ಲಿ ಬಸ್‌ ಹಾಗೂ ಕಾರೊಂದು ಡಿಕ್ಕಿಯಾಗಿದೆ. ಕಾರಿನಲ್ಲಿದ್ದ ಮೂವರು ಮೃತಪಟ್ಟಿದ್ದಾರೆ. ಇವರು ಒಂದೇ ಕುಟುಂಬದವರು ಎನ್ನಲಾಗಿದೆ. ತಂದೆ ತಾಯಿ ಮತ್ತು ಅವರ ಮಗು ಈ ಅಪಘಾತದಲ್ಲಿ ಸಾವಿಗೀಡಾಗಿದ್ದಾರೆ.

ಸಹರಾನ್ಪುರ ಜಿಲ್ಲೆಯ ದೆಹಲಿ-ಡೆಹ್ರಾಡೂನ್ ರಾಷ್ಟ್ರೀಯ ಹೆದ್ದಾರಿಯಲ್ಲಿ ಈ ಅಪಘಾತ ಸಂಭವಿಸಿದೆ. ಘಟನೆಯಲ್ಲಿ ಅನೇಕ ಜನರು ಗಂಭೀರವಾಗಿ ಗಾಯಗೊಂಡಿದ್ದು, ಸಹರಾನ್ಪುರ ಜಿಲ್ಲಾಸ್ಪತ್ರೆಗೆ ದಾಖಲು ಮಾಡಲಾಗಿದೆ.

ಅಪಘಾತಕ್ಕೀಡಾದ ಕಾರಿನಲ್ಲಿದ್ದ ಮೂರು ಲಕ್ಷ ನಗದು ಮತ್ತು ಐದು ಮೊಬೈಲ್‌ಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಘಟನೆ ಸಂಬಂಧ ಬಿಹಾರಿಗಢ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.