ನ್ಯೂಸ್

ಕಾಲೇಜು ಯುವತಿ ಮೇಲೆ ಗುಂಡಿನ ದಾಳಿ- ಸಿಸಿಟಿವಿಯಲ್ಲಿ ದಾಖಲಾಯ್ತು ಭಯಾನಕ ದೃಶ್ಯ

ಚಂಡೀಗಢ: ಕಾಲೇಜಿನಿಂದ ಹೊರಕ್ಕೆ ಬರುತ್ತಿದ್ದ ಯುವತಿಯೊಬ್ಬಳನ್ನು ಗುಂಡಿಕ್ಕಿ ಕೊಲೆ ಮಾಡಿರುವ ಘಟನೆ ಹರಿಯಾಣದ ಫರಿದಾಬಾದ್ ಜಿಲ್ಲೆಯಲ್ಲಿ ನಡೆದಿದೆ.

ನಿಖಿತಾ ತೋಮರ್ ಎಂಬ 21 ವರ್ಷದ ಯುವತಿ ಗುಂಡಿಗೆ ಬಲಿಯಾಗಿದ್ದಾಳೆ. ಪರೀಕ್ಷೆ ಮುಗಿಸಿ ಈಕೆ ಕಾಲೇಜಿನಿಂದ ಹೊರಬರುತ್ತಿದ್ದಳು. ಈ ಸಂದರ್ಭದಲ್ಲಿ ಆಕೆಯ ಮೇಲೆ ಗುಂಡಿನ ದಾಳಿ ನಡೆಸಲಾಗಿದೆ. ಘಟನೆಯ ಸಂಪೂರ್ಣ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.

ಈ ಘಟನೆಯ ವಿಡಿಯೋ ವೈರಲ್​ ಆಗಿದೆ. ಅದರ ಭಯಾನಕ ದೃಶ್ಯ ಇಲ್ಲಿದೆ ನೋಡಿ..

ಯುವತಿಯ ಕಾಲೇಜಿನ ಹೊರಗಡೆ ವಾಹನದಲ್ಲಿ ಬಂದಿದ್ದ ಆರೋಪಿ ಆಕೆಯನ್ನು ಬಲವಂತಾಗಿ ಕಾರೊಳಗೆ ಹಾಕಿ ಅಪಹರಿಸಲು ಯತ್ನಿಸಿದ್ದಾನೆ. ಈ ವೇಳೆ ಯುವತಿ ಇದಕ್ಕೆ ವಿರೋಧ ವ್ಯಕ್ತಪಡಿಸಿದ್ದಾಳೆ. ಇದರಿಂದ ಸಿಟ್ಟಿಗೆದ್ದ ಆರೋಪಿಗೆ ಮತ್ತೊಬ್ಬ ಸಾಥ್ ನೀಡಿದ್ದು, ಯುವತಿ ಮೇಲೆ ಗುಂಡು ಹಾರಿಸಿದ್ದಾರೆ.

ಆರೋಪಿಗಳು ಯುವತಿ ಮೇಲೆ ಗುಂಡು ಹಾರಿಸಿ ವಾಹನ ಹತ್ತಿ ಪರಾರಿಯಾಗಿದ್ದಾರೆ. ಇತ್ತ ಸ್ಥಳಕ್ಕೆ ದೌಡಾಯಿಸಿದ ಸ್ಥಳೀಯರು ಕೂಡಲೇ ಆಕೆಯನ್ನು ಹತ್ತಿರದ ಆಸ್ಪತ್ರೆಗೆ ದಾಖಲಿಸಿದ್ದಾರೆ. ಆದರೆ ಗಂಭೀರ ಗಾಯಗೊಂಡಿದ್ದರಿಂದ ಯುವತಿ ಮೃತಪಟ್ಟಿದ್ದಾಳೆ.

ಸಿಸಿಟಿವಿಯನ್ನು ಆಧರಿಸಿ ಒಬ್ಬ ಆರೋಪಿಯನ್ನು ಬಂಧಿಸಲಾಗಿದೆ. ಈತ ಹಾಗೂ ಯುವತಿ ಪರಿಚಯಸ್ಥರು ಎಂದು ತಿಳಿದುಬಂದಿದೆ.