ನ್ಯೂಸ್

ವಿಕ್ಟೋರಿಯಾ ಆಸ್ಪತ್ರೆಯ ಕಟ್ಟಡದಿಂದ ಹಾರಿ ಕರೊನಾ ಸೋಂಕಿತ ಆತ್ಮಹತ್ಯೆ

ಬೆಂಗಳೂರು: ನಗರದ ವಿಕ್ಟೋರಿಯಾ ಆಸ್ಪತ್ರೆಯ ಕಟ್ಟಡದಿಂದ ಹಾರಿ ಕರೊನಾ ಸೋಂಕಿತ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.

27 ವರ್ಷದ ಕುಮಾರ್ ಆತ್ಮಹತ್ಯೆಗೆ ಶರಣಾದ ಕೊರೊನಾ ಸೊಂಕಿತ ವ್ಯಕ್ತಿ. ಇವರು ಮೂಲತಃ ಬೇಗೂರಿನ ಹೊಂಗಸಂದ್ರದ ನಿವಾಸಿ. ಇದೇ ತಿಂಗಳ 25ರಂದು ಇವರಿಗೆ ಕರೊನಾ ಸೊಂಕು ಪತ್ತೆಯಾಗಿತ್ತು. ಈ ಹಿನ್ನೆಲೆಯಲ್ಲಿ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು.

ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ವಿಷಯ ತಿಳಿಯುತ್ತಿದ್ದಂತೆಯೇ ವಿ‌ವಿ ಪುರಂ ಪೋಲಿಸರು ಸ್ಥಳಕ್ಕೆ ಆಗಮಿಸಿದ್ದಾರೆ. ವಿಕ್ಟೋರಿಯ ಆಸ್ಪತ್ರೆ ಸಿಬ್ಬಂದಿ ಮೃತ ದೇಹ ಶವಗಾರಕ್ಕೆ ಸ್ಥಳಾಂತರ ಮಾಡಿದ್ದಾರ. ಪೊಲೀಸರು ವ್ಯಕ್ತಿಯ ಪತ್ತೆಗಾಗಿ ವಿಚಾರಣೆ ಆರಂಭಿಸಿದ್ದಾರೆ.