ಹೈದರಾಬಾದ್: ಐದು ಕೋಟಿ ಲಂಚ ಸ್ವೀಕಾರ ಪ್ರಕರಣದಲ್ಲಿ ಬಂಧಿತರಾಗಿದ್ದ ತಹಶೀಲ್ದಾರ್ ಒಬ್ಬರು ಜೈಲಿನಲ್ಲಿಯೇ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಎರ್ವಾ ಬಸವರಾಜು ನಾಗರಾಜು ಎನ್ನುವ ತಹಶೀಲ್ದಾರ್ ಆತ್ಮಹತ್ಯೆ ಮಾಡಿಕೊಂಡವರು. ಹೈದರಾಬಾದ್ನ ಚಂಚಲಗೂಡ ಜೈಲಿನಲ್ಲೇ ಈ ಘಟನೆ ಸಂಭವಿಸಿದೆ. ಭ್ರಷ್ಟಾಚಾರ ಆರೋಪದ ಮೇಲೆ ಸೆರೆವಾಸದಲ್ಲಿದ್ದ ಕೀಸರ ಮಾಜಿ ತಹಶೀಲ್ದಾರ್ ಚಂಚಲಗೂಡ ಜೈಲಿನಲ್ಲೇ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಲಂಚ ಪ್ರಕರಣ ಹಿನ್ನೆಲೆಯಲ್ಲಿ ಎನ್ ಸಿಬಿ ಅಧಿಕಾರಿಗಳು ನಾಗರಾಜು ಅವರನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೊಳಪಡಿಸಿದ್ದರು. ಜತೆಗೆ ಅವರ ವಿರುದ್ಧ ಎರಡು ಪ್ರಕರಣಗಳನ್ನು ದಾಖಲಿಸಿದ್ದರು. 5 ಕೋಟಿ ರೂಪಾಯಿ ಲಂಚ ಪಡೆಯುತ್ತಿದ್ದ ವೇಳೆ ಎಸಿಬಿಗೆ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದರು ಎನ್ನಲಾಗಿದೆ.
ಇದನ್ನೂ ಓದಿ: ಗೋಮಾಂಸ ಮಾರಾಟ ಶಂಕೆ, ಮಾಂಸದಂಗಡಿಗಳಿಗೆ ಮೇಯರ್ ದಾಳಿ
ಇಂದು ಬೆಳಗ್ಗೆ ಜೈಲಿನ ಕೊಠಡಿಯಲ್ಲಿ ಅವರ ದೇಹ ನೇತಾಡುತ್ತಿದ್ದನ್ನು ನೋಡಿದ ಜೈಲರ್ ಹಿರಿಯ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ.
ಮೇಲ್ನೋಟಕ್ಕೆ ಇದು ಆತ್ಮಹತ್ಯೆ ಎಂದು ಕಂಡುಬಂದಿದೆ. ಈ ಬಗ್ಗೆ ಪ್ರಕರಣ ದಾಖಲು ಮಾಡಿಕೊಳ್ಳಲಾಗಿದೆ. ಮುಂದಿನ ಪ್ರಕ್ರಿಯೆ ನಡೆಸಲಾಗುತ್ತಿದೆ ಎಂದು ಪೊಲೀಸರು ಹೇಳಿದ್ದಾರೆ.