ಬೆಂಗಳೂರು: ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ.ಎಲ್. ಸಂತೋಷ್ ಅವರ ಹೆಸರಲ್ಲಿ ನಕಲಿ ಫೇಸ್ಬುಕ್ ಖಾತೆ ತೆರೆಯಲಾಗಿದ್ದು, ಹಣಕ್ಕಾಗಿ ಬೇಡಿಕೆ ಇಡಲಾಗಿದೆ.
ಈ ಕುರಿತು ತಮ್ಮ ಫೇಸ್ಬುಕ್ನಲ್ಲಿ ಬರೆದುಕೊಂಡಿರುವ ಸಂತೋಷ್ ಅವರು, ಹುಷಾರಾಗಿ ಇರುವಂತೆ ಸೂಚನೆ ನೀಡಿದ್ದಾರೆ. "ನನ್ನ ಹೆಸರಿನಲ್ಲಿ ನಕಲಿ ಖಾತೆ ಅಥವಾ ಕ್ಲೋನ್ ಖಾತೆಯನ್ನು ರಚಿಸಲಾಗಿದೆ. ಇದನ್ನು ತಿಳಿಯದ ಅನೇಕ ಮಂದಿ ನಾನೇ ಎಂದು ತಿಳಿದುಕೊಂಡಿದ್ದಾರೆ. ಹಣಕ್ಕಾಗಿ ಬೇಡಿಕೆ ಇಡಲಾಗುತ್ತಿದೆ. ದಯವಿಟ್ಟು ಇದನ್ನು ನಂಬಬೇಡಿ, ಹುಷಾರಾಗಿರಿ " ಎಂದು ಬಿ.ಎಲ್. ಸಂತೋಷ್ ಹೇಳಿದ್ದಾರೆ.