ನ್ಯೂಸ್

ಚಾಲಕನ ನಿಯಂತ್ರಣ ತಪ್ಪಿ ಕಮರಿಯಲ್ಲಿ ಬಿದ್ದ ಕಾರು: ಐವರು ಸ್ಥಳದಲ್ಲಿಯೇ ಸಾವು

suchetana

ಜಮ್ಮು: ಶ್ರೀನಗರದಿಂದ ಪಂಜಾಬ್​ಗೆ ಹೊರಟಿದ್ದ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಕಮರಿಗೆ ಬಿದ್ದ ಪರಿಣಾಮ ಐವರು ಸ್ಥಳದಲ್ಲಿಯೇ ಮೃತಪಟ್ಟಿರುವ ಘಟನೆ ನಡೆದಿದೆ.

ಸಾಂಬಾ ಜಿಲ್ಲೆಯ ಜಮೋದಾ ಪ್ರದೇಶದ ಬಳಿ ಈ ಅಪಘಾತ ಸಂಭವಿಸಿದೆ. ವಾಹನದಲ್ಲಿ ಆರು ಮಂದಿ ಪ್ರಯಾಣಿಸುತ್ತಿದ್ದರು. ಅದರಲ್ಲಿ ಐವರು ಸ್ಥಳದಲ್ಲೇ ಸಾವನ್ನಪ್ಪಿದ್ದು, ಒಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ಕಮರಿಯ ಬಳಿ ಬರುತ್ತಿದ್ದಂತೆಯೇ ಚಾಲಕನ ನಿಯಂತ್ರಣ ತಪ್ಪಿದೆ. ಇದರಿಂದ ಕಾರು ಕಮರಿಯಲ್ಲಿ ಬಿದ್ದಿರುವುದಾಗಿ ಪೊಲೀಸರು ಹೇಳಿದ್ದಾರೆ. ಶವಗಳನ್ನು ತೆಗೆಯಲು ಪೊಲೀಸರು ಹರಸಾಹಸ ಪಡಬೇಕಾಗಿ ಬಂತು.