ನ್ಯೂಸ್

ಕತ್ತಲಲ್ಲಿ ಕಂದಕಕ್ಕೆ ಉರುಳಿದ ಕಾರು; ಸ್ಥಳದಲ್ಲಿಯೇ ಐವರ ದುರ್ಮರಣ, ಚಾಲಕನ ಸ್ಥಿತಿ ಗಂಭೀರ

ನೈನಿತಾಲ್ ​​(ಉತ್ತರಾಖಂಡ): ರಾತ್ರಿ ಸಂಚರಿಸುವ ವೇಳೆ ದಾರಿ ಕಾಣದೇ ಕಾರೊಂದು ಕಂದಕಕ್ಕೆ ಉರುಳಿ ಬಿದ್ದ ಹಿನ್ನೆಲೆಯಲ್ಲಿ ಅದರಲ್ಲಿ ಇದ್ದ ಐವರು ಪ್ರಯಾಣಿಕರು ಮೃತಪಟ್ಟಿರುವ ಘಟನೆ ಉತ್ತರಾಖಂಡದ ನೈನಿತಾಲ್​​​​​ನಲ್ಲಿ ನಡೆದಿದೆ.

ಘಟನೆಯಲ್ಲಿ ಚಾಲಕನಿಗೆ ಗಂಭೀರ ಗಾಯಗಳಾಗಿದ್ದು, ಅವರನ್ನು ಆಸ್ಪತ್ರಗೆ ಸಾಗಿಸಲಾಗಿದೆ. ಹಲ್ದ್ವಾನಿಯಿಂದ ಗುರುದ್ವಾರ ರೀತಾ ಸಾಹಿಬ್‌ಗೆ ಕಾರಿನಲ್ಲಿ ಪ್ರಯಾಣ ಬೆಳೆಸಿದ್ದರು. ಈ ಸಂದರ್ಭದಲ್ಲಿ ಓಖಲ್ಕಂಡ ಪ್ರದೇಶದಲ್ಲಿ ಚಾಲಕನ ನಿಯಂತ್ರಣ ತಪ್ಪಿ ಕಾರು ಕಂದಕಕ್ಕೆ ಉರುಳಿದೆ.

ಆಳವಾದ ಕಂದಕಕ್ಕೆ ಉರುಳಿ ಬಿದ್ದಿರುವ ಪರಿಣಾಮ ಐವರು ಪ್ರಯಾಣಿಕರು ಸ್ಥಳದಲ್ಲೇ ಸಾವನ್ನಪ್ಪಿದ್ದು, ಗಾಯಗೊಂಡ ಚಾಲಕನನ್ನು ಆಸ್ಪತ್ರೆಗೆ ಸಾಗಿಸಲಾಗಿದೆ ಎಂದು ಹಿರಿಯ ಪೊಲೀಸ್ ವರಿಷ್ಠಾಧಿಕಾರಿ ಪಂಕಜ್ ಭಟ್ ತಿಳಿಸಿದ್ದಾರೆ.