ನ್ಯೂಸ್

ದೀದಿ ನಾಡಲ್ಲಿ ಮತ್ತೆ ರೌಡಿಸಂ: ಬಿಜೆಪಿ ಅಭ್ಯರ್ಥಿಯ ಕಾರಿನ ಮೇಲೆ ದಾಳಿ ನಡೆಸಿ ತೀವ್ರ ಹಲ್ಲೆ

ಕೋಲ್ಕತಾ: ಪಶ್ಚಿಮ ಬಂಗಾಳದಲ್ಲಿ ಚುನಾವಣಾ ಕಾವು ಜೋರಾಗಿ ನಡೆದಿದೆ. ಈ ಬೆನ್ನಲ್ಲೇ ಬಿಜೆಪಿ ಅಭ್ಯರ್ಥಿ ಅಶೋಕ್ ದಿಂಡಾ ಅವರ ಮೇಲೆ ಗಂಭೀರವಾಗಿ ಹಲ್ಲೆ ನಡೆದಿದೆ.

ಮಾಜಿ ಕ್ರಿಕೆಟಿಗ ಆಗಿರುವ ಅಶೋಕ್ ದಿಂಡಾ ಅವರು ಬಿಜೆಪಿ ಅಭ್ಯರ್ಥಿ. ಕ್ರಿಕೆಟ್​ಗೆ ನಿವೃತ್ತಿ ಘೋಷಿಸಿದ ನಂತರ ಇವರು ಇತ್ತೀಚೆಗೆ ಬಿಜೆಪಿಗೆ ಸೇರಿದ್ದಾರೆ. ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಇವರಿಗೆ ಮೊಯ್ನಾ ಕ್ಷೇತ್ರದಿಂದ ಟಿಕೆಟ್​ ನೀಡಿದೆ.

ಈ ಹಿನ್ನೆಲೆಯಲ್ಲಿ ಚುನಾವಣಾ ಪ್ರಚಾರದ ಸಮಯದಲ್ಲಿ ಅವರ ಮೇಲೆ ಹಲ್ಲೆಯಾಗಿದ್ದು, ಇದು ರಾಜಕೀಯ ಪ್ರೇರಿತ ಎನ್ನಲಾಗಿದೆ. ಪ್ರಚಾರದ ರೋಡ್ ಷೋ ಸಮಯದಲ್ಲಿ ಅಶೋಕ್ ದಿಂಡಾ ಅವರ ಕಾರಿನ ಮೇಲೆ ದಾಳಿ ಮಾಡಲಾಗಿದ್ದು, ಅವರ ಮೇಲೆಯೂ ಹಲ್ಲೆ ನಡೆಸಲಾಗಿದೆ ಎಂದು ಮೂಲಗಳು ಹೇಳಿವೆ.

ತಮ್ಮ ಮೇಲೆ ನಡೆದಿರುವ ಹಲ್ಲೆಯ ಕುರಿತು ಟ್ವೀಟ್ ಮಾಡಿರುವ ಅಶೋಕ್ ದಿಂಡಾ, ಹಲ್ಲೆಗೆ ತೃಣಮೂಲ ಕಾಂಗ್ರೆಸ್ ಅನ್ನು ದೂಷಿಸಿದ್ದಾರೆ. ಸಂಜೆ 4 ಗಂಟಡಯ ಹೊತ್ತಿಗೆ ತಮ್ಮ ಬೆಂಗಾವಲು ಪಡೆಯ ಮೇಲೆ ತೃಣಮೂಲ ಕಾಂಗ್ರೆಸ್ ಕಾರ್ಯಕರ್ತರು ಹಲ್ಲೆ ನಡೆಸಿದ್ದಾರೆ. ಮೊಯ್ನಾದ ಬಿಡಿಒ ಬಳಿ ಟಿಎಂಸಿ ಕಾರ್ಯಕರ್ತರು ತಮ್ಮನ್ನು ಸುತ್ತುವರೆದು ಹಲ್ಲೆ ಮಾಡಿದ್ದಾರೆ ಎಂದು ದಿಂಡಾ ಟ್ವೀಟ್​ನಲ್ಲಿ ಹೇಳಿದ್ದಾರೆ.

ಈ ಹಿಂದೆ ಕೂಡ ಇದೇ ರೀತಿಯಲ್ಲಿ ಹಲ್ಲೆಗಳು ನಡೆದಿರುವುದು ವರದಿಯಾಗಿವೆ.