ನ್ಯೂಸ್

ಜಗತ್ಪ್ರಸಿದ್ಧ ಜೋಗ ಜಲಪಾತದ ವೀಕ್ಷಣೆಗೆ ಇಂದಿನಿಂದ ಅವಕಾಶ

suchetana

ಶಿವಮೊಗ್ಗ: ಕರೊನಾ ಲಾಕ್‌ಡೌನ್ ಹಿನ್ನೆಲೆಯಲ್ಲಿ ಇಲ್ಲಿಯವರೆಗೆ ಜಗದ್ವಿಖ್ಯಾತ ಜೋಗ ಜಲಪಾತ ಪ್ರವೇಶಕ್ಕೆ ನಿರ್ಬಂಧ ವಿಧಿಸಲಾಗಿತ್ತು. ಈಗ ಅದರ ವೀಕ್ಷಣೆಗೆ ಪ್ರವಾಸಿಗರಿಗೆ ಇಂದಿನಿಂದ (ಜುಲೈ 28) ಅವಕಾಶ ಕಲ್ಪಿಸಲಾಗಿದೆ.

ಬೆಳಗ್ಗೆ 10 ಗಂಟೆಯಿಂದ ವೀಕ್ಷಣೆಗೆ ಅವಕಾಶವಿದ್ದು, ಸಂಜೆ ಐದು ಗಂಟೆವರೆಗೂ ಜೋಗದ ಸವಿಯನ್ನು ಸವಿಯಬಹುದಾಗಿದೆ.

ಸಾಮಾಜಿಕ ಅಂತರ ಕಾಯ್ದುಕೊಂಡು ಮಾಸ್ಕ್ ಧರಿಸಿ ಜಲಪಾತ ವೀಕ್ಷಣೆಗೆ ಅವಕಾಶ ಕಲ್ಪಿಸಿರುವುದಾಗಿ ಅಧಿಕಾರಿಗಳು ಹೇಳಿದ್ದಾರೆ.