ನ್ಯೂಸ್

ಕಾಂಗ್ರೆಸ್‌ಗೆ ಯುವ ನಾಯಕರ ಸೇರ್ಪಡೆ- ಇಂದು ‘ಕೈ’ ಹಿಡಿಯಲಿದ್ದಾರೆ ಕನ್ಹಯ್ಯ ಕುಮಾರ್‌, ಜಿಗ್ನೇಶ್‌

ನವದೆಹಲಿ: ಜೆಎನ್​​ಯು ವಿದ್ಯಾರ್ಥಿ ಸಂಘಟನೆಯ ಅಧ್ಯಕ್ಷರಾಗಿದ್ದ, ಸಿಪಿಐ ಮುಖಂಡ ಕನ್ಹಯ್ಯ ಕುಮಾರ್ ಹಾಗೂ ಗುಜರಾತ್ ಶಾಸಕ (ಸ್ವತಂತ್ರ) ಜಿಗ್ನೇಶ್ ಮೇವಾನಿ ಅವರು ಇಂದು ರಾಹುಲ್ ಗಾಂಧಿ ಅವರ ಸಮ್ಮುಖದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಸೇರಲಿದ್ದಾರೆ.

ಇದುವರೆಗೆ ಸಿಪಿಐನಲ್ಲಿಯೇ ಇರುವ ಕನ್ಹಯ್ಯ ಕುಮಾರ್‌ ಅವರು ಕಾಂಗ್ರೆಸ್‌ ಸೇರ್ಪಡೆಗೊಳ್ಳುತ್ತಿದ್ದಾರೆ ಎಂಬ ಕಾರಣದಿಂದ ಕಾಂಗ್ರೆಸ್‌ ವಲಯದಲ್ಲಿ ಭಾರಿ ಸಂತಸದ ವಾತಾವರಣ ನಿರ್ಮಾಣವಾಗಿದ್ದು, ದೆಹಲಿಯ ತುಂಬೆಲ್ಲಾ ಅವರನ್ನು ಸ್ವಾಗತಿಸುವ ಫೋಟೋ ರಾರಾಜಿಸುತ್ತಿದೆ. ಇವರು 2019 ರ ಸಾರ್ವತ್ರಿಕ ಚುನಾವಣೆಗೆ ಮುನ್ನ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಸಿಪಿಐ) ಸೇರಿದ್ದರು. ಊರು ಬಿಹಾರದ ಬೇಗುಸರೈನಲ್ಲಿ ಸ್ಪರ್ಧಿಸಿದ್ದರು. ಆದರೆ ಬಿಜೆಪಿಯ ಗಿರಿರಾಜ್ ಸಿಂಗ್ ವಿರುದ್ಧ ಪರಾಭವಗೊಂಡಿದ್ದರು.

ಇನ್ನು ಜಿಗ್ನೇಶ್‌ ಅವರು ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸಿ ಗೆಲುವು ಸಾಧಿಸಿದ್ದರು. 2017ರ ಚುನಾವಣೆಯಲ್ಲಿ ಕಾಂಗ್ರೆಸ್‌ ಬೆಂಬಲದೊಂದಿಗೆ ಇವರು ಸ್ಪರ್ಧಿಸಿದ್ದರು. ಇದೀಗ ಅವರೂ ಕಾಂಗ್ರೆಸ್‌ ಸೇರಲಿದ್ದಾರೆ.