ಉತ್ತರ ಕನ್ನಡದ ಕಾರವಾರ ಜಿಲ್ಲಾ ಪಂಚಾಯಿತಿ ವತಿಯಿಂದ ಸಂಜೀವಿನಿ-ಕರ್ನಾಟಕ ರಾಜ್ಯ ಗ್ರಾಮೀಣ ಜೀವನೋಪಾಯ ಸಂವರ್ಧನಾ ಸಂಸ್ಥೆ (ಕೆಎಸ್ಆರ್ಎಲ್ಪಿಎಸ್) ಅಡಿಯಲ್ಲಿ ಅನುಷ್ಠಾನವಾಗುತ್ತಿರುವ ಎನ್ಆರ್ಎಲ್ಎಂ ಯೋಜನೆಯಡಿ ಜಿಲ್ಲೆ ಮತ್ತು ತಾಲೂಕು ಅಭಿಯಾನ ಘಟಕಗಳಲ್ಲಿ ಅನುಮೋದನೆಗೊಂಡು ಖಾಲಿ ಇರುವ ಸೂಚಿತ ಹುದ್ದೆಗಳನ್ನು ಹೊರಗುತ್ತಿಗೆ ಆಧಾರದ ಮೇಲೆ ವಿವಿಧ ಹುದ್ದೆಗೆ ನೇಮಕ ಮಾಡಿಕೊಳ್ಳಲಾಗುತ್ತಿದೆ. ಸಿದ್ಧಾಪುರ, ಮುಂಡುಗೋಡು, ಹಳಿಯಾಳ, ಹೊನ್ನಾವರ, ಕುಮಟಾ, ಭಟ್ಕಳ, ಕಾರವಾರಗಳಲ್ಲಿ ನೇಮಕಾತಿ ಮಾಡಿಕೊಳ್ಳಲಾಗುವುದು.
ಒಟ್ಟು ಹುದ್ದೆಗಳು: 9
ಹುದ್ದೆ ವಿವರ
* ತಾಲೂಕು ಪ್ರೋಗ್ರಾಮ್ ಮ್ಯಾನೇಜರ್ - 6
ಪೂರ್ಣಾವಧಿಯಲ್ಲಿ ಸ್ನಾತಕೋತ್ತರ ಪದವಿ ಅಥವಾ ಸ್ನಾತಕೋತ್ತರ ಡಿಪ್ಲೊಮಾ ಮಾಡಿರುವ, ಕಂಪ್ಯೂಟರ್ ಜ್ಞಾನ ಇರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಕನಿಷ್ಠ 5 ವರ್ಷದ ವೃತ್ತಿ ಅನುಭವ ಕೇಳಲಾಗಿದೆ. ಕನಿಷ್ಠ 18, ಗರಿಷ್ಠ 45 ವರ್ಷ ವಯೋಮಿತಿ ನಿಗದಿಪಡಿಸಿದ್ದು, ಮಾಸಿಕ 28,000 ರೂ. ವೇತನ ನೀಡಲಾಗುವುದು.
* ಕ್ಲಸ್ಟರ್ ಸೂಪರ್ವೈಸರ್ - 2
ಪೂರ್ಣಕಾಲಿಕ ಪದವೀಧರರಾಗಿದ್ದು, ಇಂಗ್ಲಿಷ್ ಹಾಗೂ ಕನ್ನಡ ಭಾಷೆಯಲ್ಲಿ ಓದಲು, ಬರೆಯಲು, ಮಾತನಾಡಲು ತಿಳಿದಿರಬೇಕು. ಕಂಪ್ಯೂಟರ್ ಜ್ಞಾನ ಕೂಡ ಅವಶ್ಯ. ಕನಿಷ್ಠ 2 ವರ್ಷದ ವೃತ್ತಿ ಅನುಭವ ಕೇಳಲಾಗಿದ್ದು, ಗರಿಷ್ಠ 45 ವರ್ಷ ವಯೋಮಿತಿ ಇದೆ. ಮಾಸಿಕ 18,000 ರೂ. ವೇತನ ನಿಗದಿಪಡಿಸಲಾಗಿದೆ.
* ಡಿಎಂಐಎಸ್ ಅಸಿಸ್ಟೆಂಟ್ (ಜಿಲ್ಲಾ ಮಟ್ಟ) - 1
ಪೂರ್ಣವಧಿಯಲ್ಲಿ ಪದವಿ ಪಡೆದಿದ್ದು, ಇಂಗ್ಲಿಷ್ ಹಾಗೂ ಕನ್ನಡ ಭಾಷೆಯಲ್ಲಿ ಓದಲು, ಬರೆಯಲು, ಮಾತನಾಡಲು ತಿಳಿದಿರಬೇಕು. ಕಂಪ್ಯೂಟರ್ ಜ್ಞಾನ ಅವಶ್ಯ. ಕನಿಷ್ಠ 3 ವರ್ಷದ ವೃತ್ತಿ ಅನುಭವ ಕೇಳಲಾಗಿದ್ದು, ಗರಿಷ್ಠ 45 ವರ್ಷ ವಯೋಮಿತಿ ನಿಗಿದಿಪಡಿಸಲಾಗಿದೆ. ಮಾಸಿಕ 20,500 ರೂ. ವೇತನ ಇದೆ.
ಸೂಚನೆ: ಆಸಕ್ತ ಅಭ್ಯರ್ಥಿಗಳು ವೆಬ್ಸೈಟ್ನಲ್ಲಿ ತಮ್ಮ ಮಾಹಿತಿಯನ್ನು ಭರ್ತಿ ಮಾಡಿ ಆನ್‌ಲೈನ್‌ನಲ್ಲಿ ಮಾತ್ರ ಅರ್ಜಿ ಸಲ್ಲಿಸಲು ಅವಕಾಶ ಇರುತ್ತದೆ. ಅಭ್ಯರ್ಥಿಗಳ ಶೈಕ್ಷಣಿಕ ಅಂಕ, ವೃತ್ತಿ ಅನುಭವ ಆಧರಿಸಿ ಶಾರ್ಟ್ಲಿಸ್ಟ್ ಮಾಡಿ 1:3ರ ಅನುಪಾತದಲ್ಲಿ ಮೌಖಿಕ ಸಂದರ್ಶನಕ್ಕೆ ಆಹ್ವಾನಿಸಲಾಗುವುದು.
ಅರ್ಜಿ ಸಲ್ಲಿಸಲು ಕೊನೇ ದಿನ: 29.12.2021
ಅಧಿಸೂಚನೆಗೆ: https://bit.ly/3pppTMP
ಮಾಹಿತಿಗೆ: http://zpkarwar.kar.nic.in