ಬೆಂಗಳೂರು:ಸಾಹಿತ್ಯ, ಸಂಸ್ಕೃತಿ, ಸಮಾಜ ಸಂಘಟನೆ, ಪರಿಸರ ಸಂರಕ್ಷಣೆ, ಸ್ವದೇಶಿ ಅಭಿಯಾನ, ಪತ್ರಿಕೋದ್ಯಮ ಸೇರಿ ಅನೇಕ ಕ್ಷೇತ್ರಗಳಲ್ಲಿ 60ಕ್ಕೂ ಹೆಚ್ಚು ವರ್ಷಗಳಿಂದ ನಿಸ್ವಾರ್ಥ ಸೇವೆ ಸಲ್ಲಿಸುತ್ತಿರುವ ನಾಡೋಜ ಡಾ. ಎಸ್.ಆರ್. ರಾಮಸ್ವಾಮಿ ಅವರಿಗೆ 2024ನೇ ಸಾಲಿನ ‘ಎಸ್.ಎಲ್. ಭೈರಪ್ಪ ಸಾಹಿತ್ಯ ಪ್ರತಿಷ್ಠಾನ ಪ್ರಶಸ್ತಿ’ ಲಭಿಸಿದೆ.
ಪ್ರಶಸ್ತಿಯು 1 ಲಕ್ಷ ರೂ. ಮತ್ತು ಡಾ. ಎಸ್.ಎಲ್. ಭೈರಪ್ಪ ಅವರ ಸಹಿ ಇರುವ ಪ್ರಶಸ್ತಿಪತ್ರ ಒಳಗೊಂಡಿದೆ. ಫೆ.18ರಂದು ಬೆಂಗಳೂರಿನ ಗೋಖಲೆ ಸಾರ್ವಜನಿಕ ವಿಚಾರ ಸಂಸ್ಥೆಯಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಕನ್ನಡ ವಿದ್ವಾಂಸ ಡಾ. ಟಿ.ವಿ. ವೆಂಕಟಾಚಲಶಾಸಿ ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ. ಡಾ. ಎಸ್.ಆರ್. ರಾಮಸ್ವಾಮಿ ಅವರ ಸಾಹಿತ್ಯ ಕೊಡುಗೆಗಳ ಕುರಿತು ಶತಾವಧಾನಿ ಡಾ. ಆರ್. ಗಣೇಶ್, ರಾಷ್ಟ್ರೋತ್ಥಾನ ಸಾಹಿತ್ಯ ಸಂಪಾದಕ ವಿಘ್ನೇಶ್ವರ ಭಟ್, ದಿ ಧರ್ಮ ಡಿಸ್ಪಾಚ್ ಸ್ಥಾಪಕ ಸಂಪಾದಕ ಸಂದೀಪ್ ಬಾಲಕೃಷ್ಣ ಮಾತನಾಡಲಿದ್ದಾರೆ.