ಅಮರಾವತಿ (ಆಂಧ್ರಪ್ರದೇಶ): ವೇಶ್ಯಾಗೃಹಗಳ ಮೇಲೆ ಪೊಲೀಸರು ರೇಡ್ ಮಾಡಿದ ಸಂದರ್ಭದಲ್ಲಿ ಅಲ್ಲಿ ಸಿಕ್ಕಿಬೀಳುವ ಗ್ರಾಹಕರ ವಿರುದ್ಧ ಯಾವುದೇ ಕಾನೂನು ಕ್ರಮ ಕೈಗೊಳ್ಳುವಂತಿಲ್ಲ ಎಂದು ಆಂಧ್ರಪ್ರದೇಶ ಹೈಕೋರ್ಟ್ ಹೇಳಿದೆ.
ವೇಶ್ಯಾಗೃಹದ ಮೇಲೆ ದಾಳಿ ಮಾಡಿದ ಸಂದರ್ಭದಲ್ಲಿ ತಮ್ಮ ವಿರುದ್ಧ ಗುಂಟೂರು ಜಿಲ್ಲಾ ಪೊಲೀಸರು ಪೊಲೀಸರು ದಾಖಲು ಮಾಡಿದ್ದ ದೂರನ್ನು ವಜಾಗೊಳಿಸುವಂತೆ ಕೋರಿ ವ್ಯಕ್ತಿಯೊಬ್ಬರು ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿರುವ ಕೋರ್ಟ್ ಈ ತೀರ್ಪು ನೀಡಿದೆ.
ವೇಶ್ಯಾವಾಟಿಕೆಗೆ ಮನೆ ನೀಡುವವರನ್ನು ವಿಚಾರಣೆಗೆ ಒಳಪಡಿಸಬಹುದು, ಆದರೆ ಗ್ರಾಹಕನಾಗಿ ಹೋದ ವ್ಯಕ್ತಿಯ ವಿರುದ್ಧ ಕಾನೂನು ಕ್ರಮ ಜರುಗಿಸುವುದು ಸರಿಯಲ್ಲ ಎಂದು ಕೋರ್ಟ್ ಹೇಳಿದೆ.
ಕಳೆದ ವರ್ಷ ಗುಂಟೂರಿನ ವೇಶ್ಯಾಗೃಹದ ಮೇಲೆ ಪೊಲೀಸರು ದಾಳಿ ನಡೆಸಿದ್ದರು. ಅಲ್ಲಿಗೆ ಹೋಗಿದ್ದ ಅನೇಕ ಗ್ರಾಹಕರನ್ನು ಬಂಧಿಸಿ ಎಫ್ಐಆರ್ ದಾಖಲು ಮಾಡಲಾಗಿತ್ತು. . ಗುಂಟೂರಿನ ಪ್ರಥಮ ದರ್ಜೆ ಜುಡಿಶಿಯಲ್ ಮ್ಯಾಜಿಸ್ಟ್ರೇಟ್ ನ್ಯಾಯಾಲಯದಲ್ಲಿ ನಡೆಯುತ್ತಿತ್ತು. ಇದನ್ನು ಪ್ರಶ್ನಿಸಿ ವ್ಯಕ್ತಿಯೊಬ್ಬರು ಅರ್ಜಿ ಸಲ್ಲಿಸಿದ್ದರು.