ನ್ಯೂಸ್

ಫ್ಯಾಮಿಲಿ ಕೋರ್ಟ್‌ ಡಿವೋರ್ಸ್‌ ನೀಡಿದೆ- ಪತಿ ಮೇಲ್ಮನವಿ ಸಲ್ಲಿಸಲ್ಲ- ಕೂಡಲೇ ಮರುಮದುವೆಯಾಬಹುದೆ?

ನಾನು ನನ್ನ ಪತಿಯಿಂದ ವಿಚ್ಛೇದನ ಪಡೆದಿದ್ದೇನೆ. ನನ್ನ ಪೂರ್ವ ಪತಿ ಅಪೀಲು ಹಾಕುವುದಿಲ್ಲ ಎನ್ನುವ ನಂಬಿಕೆ ನನಗಿದೆ.

ಈಗ ನನಗೆ ಮತ್ತೊಬ್ಬರ ಜೊತೆ ಮದುವೆ ಆಗಬೇಕಿದೆ. ಕೂಡಲೇ ಮದುವೆಯಾಗಬಹುದೆ ಅಥವಾ ಕಾನೂನಿನಡಿ ಕಾಯುವ ಅವಧಿ ಅಂತೇನಾದರೂ ಇದೆಯೆ?

ಉತ್ತರ:- ಹಿಂದೂ ವಿವಾಹ ಕಾಯ್ದೆಯ ಕಲಂ 15ರಂತೆ , ವಿಚ್ಛೇದನದ ಆದೇಶ ಆದ ನಂತರ , ಆ ಆದೇಶದ ಮೇಲೆ ಮೇಲ್ಮನವಿ (ಅಪೀಲ್​) ಹಾಕಲು ಇರುವ, ಅಪೀಲಿನ ಗಡುವು ತೀರುವವರೆಗೆ ನೀವು ಮರುಮದುವೆ ಆಗುವಂತಿಲ್ಲ.

ಹಾಗೂ ಒಂದು ವೇಳೆ ನಿಮ್ಮ ಪೂರ್ವ ಪತಿ ಅಪೀಲು ದಾಖಲು ಮಾಡಿದರೆ, ಆ ಅಪೀಲು ವಜಾ ಆಗುವವರೆಗೆ ನೀವು

ಮರುಮದುವೆ ಆಗುವಂತಿಲ್ಲ. ಒಂದುವೇಳೆ ನಿಮ್ಮ ಪತಿ ನಿಗದಿತ ಕಾಲಮಿತಿಯ ಒಳಗೆ ಅಪೀಲೇ ದಾಖಲು ಮಾಡದೇ ಇದ್ದರೆ, ಆಗ ನೀವು ಮರುಮದುವೆ ಆಗಬಹುದು.

ಯಾವುದಕ್ಕೂ ನೀವು ನಿಮ್ಮ ವಿಚ್ಛೇದನದ ಪ್ರಕರಣದ ಸಂಖ್ಯೆಯನ್ನು ಹಾಕಿ, ಆ ಪ್ರಕರಣದ ಆದೇಶದ ಮೇಲೆ ಅಪೀಲು ದಾಖಲಾಗಿದೆಯೇ ಇಲ್ಲವೇ ಎನ್ನುವುದನ್ನು ಕಂಪ್ಯೂಟರಿನ ಸಹಾಯದಿಂದ ಪರೀಕ್ಷಿಸಿ , ಆ ನಂತರ ಮರುಮದುವೆಯ ಬಗ್ಗೆ ತೀರ್ಮಾನ ತೆಗೆದುಕೊಳ್ಳುವುದು ಒಳ್ಳೆಯದು.

ಕಾನೂನಿಗೆ ಸಂಬಂಧಿಸಿದ ಇತರ ಪ್ರಶ್ನೋತ್ತರಗಳಿಗಾಗಿ ಈ ಲಿಂಕ್​ ಕ್ಲಿಕ್ಕಿಸಿ   https://www.vijayavani.net/category/%e0%b2%a8%e0%b3%8d%e0%b2%af%e0%b2%be%e0%b2%af%e0%b2%a6%e0%b3%87%e0%b2%b5%e0%b2%a4%e0%b3%86/