ನ್ಯೂಸ್

ಪ್ರಿಯಾಂಕಾ ಗಾಂಧಿಗೆ ಕರೊನಾ: ಎರಡು ತಿಂಗಳಲ್ಲೇ ಮತ್ತೆ ಕಾಣಿಸಿಕೊಂಡ ಸೋಂಕು- ಟ್ವೀಟ್​ ಮೂಲಕ ಮಾಹಿತಿ

ನವದೆಹಲಿ: ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿಗೆ ಕರೊನಾ ಸೋಂಕು ಕಾಣಿಸಿಕೊಂಡಿದೆ. ಕಳೆದ ತಿಂಗಳು ಪಿಯಾಂಕಾ ಗಾಂಧಿಗೆ ಕೊರೊನಾ ಸೋಂಕು ಕಾಣಿಸಿಕೊಂಡಿತ್ತು. ಆ ಬಳಿಕ ಗುಣಮುಖರಾಗಿದ್ದರು. ಇದೀಗ ಮತ್ತೆ ಸೋಂಕು ಕಾಣಿಸಿಕೊಂಡಿದೆ.

ಕಳೆದ ಜೂನ್‌ 3ರಂದು ಪ್ರಿಯಾಂಕಾ ಗಾಂಧಿಗೆ ಕರೊನಾ ಸೋಂಉ ಕಾಣಿಸಿಕೊಂಡಿತ್ತು. ಆ ಬಳಿಕ ಗುಣಮುಖರಾಗಿದ್ದರು. ಇದೀಗ ಮತ್ತೆ ಸೋಂಕು ಕಾಣಿಸಿಕೊಂಡಿದೆ. ಈ ಮೂಲಕ ಎರಡು ತಿಂಗಳ ಅಂತರದಲ್ಲಿ ಎರಡನೇ ಬಾರಿ ಕರೊನಾ ಪಾಸಿಟಿವ್ ವರದಿಯಾಗಿದೆ.

ಈ ಕುರಿತು ಟ್ವಿಟರ್​ನಲ್ಲಿ ಮಾಹಿತಿ ಹಂಚಿಕೊಂಡಿರುವ ಪ್ರಿಯಾಂಕಾ, "ಇಂದು ಮತ್ತೆ ಕೋವಿಡ್ ದೃಢಪಟ್ಟಿದೆ. ಮನೆಯಲ್ಲಿ ಪ್ರತ್ಯೇಕವಾಗಿರುತ್ತೇನೆ ಮತ್ತು ಎಲ್ಲಾ ಪ್ರೋಟೋಕಾಲ್‌ಗಳನ್ನು ಅನುಸರಿಸುತ್ತೇನೆ. ನನ್ನೊಂದಿಗೆ ಸಂಪರ್ಕಕ್ಕೆ ಬಂದವರು ಎಲ್ಲಾ ಅಗತ್ಯ ಮುನ್ನೆಚ್ಚರಿಕೆಗಳನ್ನು ತೆಗೆದುಕೊಳ್ಳುವಂತೆ ನಾನು ವಿನಂತಿಸುತ್ತೇನೆ ಎಂದಿದ್ದಾರೆ.

ಕಳೆದ ಜೂನ್ ಮೊದಲ ವಾರದಲ್ಲಿ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರಿಗೂ ಕರೊನಾ ಕಾಣಿಸಿಕೊಂಡಿತ್ತು. ಈಗ ಅವರು ಚೇತರಿಸಿಕೊಳ್ಳುತ್ತಿದ್ದಾರೆ. (ಏಜೆನ್ಸೀಸ್​)