ಬೆಂಗಳೂರು : 2020 -21 ನೇ ಶೈಕ್ಷಣಿಕ ಸಾಲಿನಲ್ಲಿ ಮಕ್ಕಳ ದಾಖಲಾತಿಗೆ ನೀಡಿದ್ದ ಕಾಲಾವಕಾಶವನ್ನು ಅಕ್ಟೋಬರ್ 16ರ ವರೆಗೆ ವಿಸ್ತರಿಸಿ ಸಾರ್ವಜನಿಕ ಶಿಕ್ಷಣ ಇಲಾಖೆ ಆದೇಶ ಹೊರಡಿಸಿದೆ.
ರಾಜ್ಯದ ಎಲ್ಲಾ ಸರ್ಕಾರಿ, ಅನುದಾನಿತ ಮತ್ತು ಖಾಸಗಿ ಅನುದಾನರಹಿತ ಶಾಲೆಗಳಲ್ಲಿ ಅಕ್ಟೋಬರ್ 16 ರವರೆಗೆ ದಾಖಲಾತಿಗೆ ಅವಕಾಶ ನೀಡಲಾಗಿದೆ.
ಇದರಿಂದ ಶಾಲೆಯ ಆಡಳಿಯ ಮಂಡಳಿ ಮನವಿ ಸಲ್ಲಿಸಿದ್ದವು. ಅದನ್ನೀಗ ಸರ್ಕಾರ ಪುರಸ್ಕರಿಸಿದೆ. ಈ ಸಂಬಂಧ ಪರಿಷ್ಕೃತ ಆದೇಶ ಹೊರಡಿಸಿದೆ.