ನ್ಯೂಸ್

ನಿಯಂತ್ರಣ ತಪ್ಪಿ ಪ್ರಪಾತಕ್ಕೆ ಉರುಳಿದ ಶಾಲಾ ಬಸ್​: 16 ಮಂದಿ ದುರ್ಮರಣ- ಹಲವರ ಸ್ಥಿತಿ ಚಿಂತಾಜನಕ

ಶಿಮ್ಲಾ: ಶಾಲಾ ಬಸ್ ಕಣಿವೆಗೆ ಉರುಳಿ ಮಕ್ಕಳು ಸೇರಿದಂತೆ 16 ಮಂದಿ ಮೃತಪಟ್ಟಿರುವ ಘಟನೆ ಹಿಮಾಚಲ ಪ್ರದೇಶದ ಕುಲು ಜಿಲ್ಲೆಯಲ್ಲಿ ನಡೆದಿದೆ. ಸೈಂಜ್ ಕಣಿವೆಯ ನ್ಯೂಲಿ-ಶಂಶಾರ್ ರಸ್ತೆಯಲ್ಲಿ ಕುಲು-ಸೈಂಜ್‌ಗೆ ಬಳಿ ಬೆಳಗ್ಗೆ 8.30ರ ಸುಮಾರಿಗೆ ಈ ಘಟನೆ ಸಂಭವಿಸಿದೆ.

ಮೃತಪಟ್ಟವರಲ್ಲಿ ಹೆಚ್ಚಿನವರು ವಿದ್ಯಾರ್ಥಿಗಳೇ ಆಗಿದ್ದಾರೆ. ಹಲವರಿಗೆ ಗಂಭೀರ ಗಾಯಗಳಾಗಿದ್ದು, ಸಾವಿನ ಸಂಖ್ಯೆ ಇನ್ನೂ ಏರುವ ಸಾಧ್ಯತೆಗಳಿವೆ ಎನ್ನಲಾಗಿದೆ.

ರಕ್ಷಣಾ ತಂಡ ಸ್ಥಳಕ್ಕೆ ಧಾವಿಸಿದ್ದು, ಗಾಯಾಳುಗಳನ್ನು ಆಸ್ಪತ್ರೆಗೆ ಸಾಗಿಸಲಾಗುತ್ತಿದೆ.ಇನ್ನಷ್ಟು ಮಾಹಿತಿ ನಿರೀಕ್ಷಿಸಲಾಗುತ್ತಿದೆ.

ಘಟನೆಗೆ ಪ್ರಧಾನಿ ನರೇಂದ್ರ ಮೋದಿ ಸಂತಾಪ ಸೂಚಿಸಿದ್ದಾರೆ. ಭೀಕರ ಬಸ್ ಅಪಘಾತದಿಂದ ಪ್ರಾಣ ಕಳೆದುಕೊಂಡವರ ಕುಟುಂಬಗಳಿಗೆ ಪಿಎಂಎನ್‌ಆರ್‌ಎಫ್‌ನಿಂದ ತಲಾ 2 ಲಕ್ಷ ರೂಪಾಯಿ ಪರಿಹಾರ ಘೋಷಿಸಿದ್ದಾರೆ.ಗಾಯಾಳುಗಳಿಗೆ ತಲಾ 50 ಸಾವಿರ ರೂಪಾಯಿ ನೀಡಲಾಗುವುದು ಎಂದು ಟ್ವೀಟ್​ ಮೂಲಕ ತಿಳಿಸಿದ್ದಾರೆ.