ಪವರ್ ಗ್ರಿಡ್ ಕಾರ್ಪೋರೇಷನ್ ಆಫ್ ಇಂಡಿಯಾ ಲಿಮಿಟೆಡ್ ಕೇಂದ್ರ ಸರ್ಕಾರದ ಅಧೀನದಲ್ಲಿ ಕಾರ್ಯನಿರ್ವಹಿಸುವ ಸಂಸ್ಥೆಯಾಗಿದ್ದು, ಪ್ರಸ್ತುತ ಉತ್ತರಭಾರತ ಪ್ರದೇಶದ ಹಲವು ನಗರಗಳಲ್ಲಿ ಡಿಪ್ಲೊಮಾ ಟ್ರೇನಿಗಳನ್ನು ನೇಮಕ ಮಾಡಿಕೊಳ್ಳಲಾಗುತ್ತಿದೆ.
ಒಟ್ಟು ಸ್ಥಾನಗಳು: 40
ಪವರ್ ಗ್ರಿಡ್ ಸಂಸ್ಥೆಗೆ ನೇಮಕ ಮಾಡಿಕೊಳ್ಳಲಾಗುವ ಅಭ್ಯರ್ಥಿಗಳನ್ನು ದೇಶದ ಯಾವುದೇ ಭಾಗಕ್ಕೆ ಬೇಕಾದರೂ ನೇಮಕ ಮಾಡಬಹುದಾಗಿದೆ ಎಂದು ಸಂಸ್ಥೆ ತಿಳಿಸಿದೆ. ಉತ್ತರಪ್ರದೇಶ, ಉತ್ತರಾಖಂಡ, ರಾಜಸ್ಥಾನ, ಹರಿಯಾಣ ಮತ್ತು ದೆಹಲಿಯಲ್ಲಿ ನೇಮಕ ಮಾಡಿಕೊಳ್ಳಲಾಗುತ್ತಿದೆ. ಲಿಖಿತ ಪರೀಕ್ಷೆ/ ಕಂಪ್ಯೂಟರ್ ಆಧಾರಿತ ಪರೀಕ್ಷೆ ಮೂಲಕ ಆಯ್ಕೆ ಪ್ರಕ್ರಿಯೆ ನಡೆಯಲಿದೆ. ದೆಹಲಿ, ಜೈಪುರ, ಡೆಹ್ರಾಡೂನ್ ಪರೀಕ್ಷಾ ಕೇಂದ್ರವಾಗಿರಲಿದೆ.
ಸ್ಥಾನಗಳ ವಿವರ
* ಡಿಪ್ಲೊಮಾ ಟ್ರೇನಿ (ಎಲೆಕ್ಟ್ರಿಕಲ್) -30
* ಡಿಪ್ಲೊಮಾ ಟ್ರೇನಿ (ಸಿವಿಲ್) -5
ವಿದ್ಯಾರ್ಹತೆ: ಎಲೆಕ್ಟ್ರಿಕಲ್/ ಎಲೆಕ್ಟ್ರಿಕಲ್ ಆ್ಯಂಡ್ ಎಲೆಕ್ಟ್ರಾನಿಕ್ಸ್/ ಪವರ್ ಸಿಸ್ಟಂ/ ಪವರ್ ಇಂಜಿನಿಯರಿಂಗ್/ ಸಿವಿಲ್ ಇಂಜಿನಿಯರಿಂಗ್ನಲ್ಲಿ 3 ವರ್ಷದ ಡಿಪ್ಲೊಮಾ ಮಾಡಿರಬೇಕು. ಬಿಇ, ಬಿ.ಟೆಕ್/ ಎಂಇ/ ಎಂ.ಟೆಕ್ ಮಾಡಿದ್ದು ಡಿಪ್ಲೊಮಾ ಮಾಡಿರದ ಅಭ್ಯರ್ಥಿಗಳು ಅರ್ಹರಾಗಿರುವುದಿಲ್ಲ.
ವಯೋಮಿತಿ: 15.6.2021ಕ್ಕೆ ಅನ್ವಯವಾಗುವಂತೆ ಸಾಮಾನ್ಯವರ್ಗದ ಅಭ್ಯರ್ಥಿ, ಆರ್ಥಿಕವಾಗಿ ದುರ್ಬಲವಾಗಿರುವ ಅಭ್ಯರ್ಥಿಗೆ ಗರಿಷ್ಠ 27 ವರ್ಷ, ಇತರ ಹಿಂದುಳಿದ ವರ್ಗದ ಅಭ್ಯರ್ಥಿಗೆ ಗರಿಷ್ಠ 30 ವರ್ಷ, ಎಸ್ಸಿ, ಎಸ್ಟಿಗೆ 32 ವರ್ಷ ನಿಗದಿಪಡಿಸಲಾಗಿದೆ.
ಮೀಸಲಾತಿ: 35 ಹುದ್ದೆಗಳಲ್ಲಿ ಸಾಮಾನ್ಯವರ್ಗದ ಅಭ್ಯರ್ಥಿಗೆ 13 ಸ್ಥಾನ, ಇತರ ಹಿಂದುಳಿದ ವರ್ಗಕ್ಕೆ 8, ಎಸ್ಸಿಗೆ 7, ಎಸ್ಟಿಗೆ 2, ಆರ್ಥಿಕವಾಗಿ ದುರ್ಬಲವಾಗಿರುವ ಅಭ್ಯರ್ಥಿಗಳಿಗೆ 5 ಸ್ಥಾನಗಳನ್ನು ಮೀಸಲಿರಿಸಲಾಗಿದೆ. ಅಂಗವಿಕಲ ಅಭ್ಯರ್ಥಿಗಳಿಗೆ ಎಲೆಕ್ಟ್ರಿಕಲ್ ಡಿಪ್ಲೊಮಾ ಟ್ರೇನಿಯಲ್ಲಿ 2 ಸ್ಥಾನ ಕಾಯ್ದಿರಿಸಲಾಗಿದೆ.
ಅರ್ಜಿ ಶುಲ್ಕ: ಎಸ್ಸಿ, ಎಸ್ಟಿ, ಅಂಗವಿಕಲ, ಮಾಜಿ ಸೈನಿಕ, ಸಂಸ್ಥೆಯ ಅಭ್ಯರ್ಥಿಗಳನ್ನು ಹೊರತುಪಡಿಸಿ ಉಳಿದ ಅಭ್ಯರ್ಥಿಗಳು 300 ರೂ. ಶುಲ್ಕ ಪಾವತಿಸಬೇಕು.
ವೇತನ: ತರಬೇತಿ ಅವಧಿಯಲ್ಲಿ ಮಾಸಿಕ 27,500 ರೂ. ಸ್ಟೈಪೆಂಡ್ ನೀಡಲಾಗುವುದು. ನಂತರ ಇದೇ ವೇತನ ಶ್ರೇಣಿಯಲ್ಲಿ ಜೂನಿಯರ್ ಇಂಜಿನಿಯರ್ ಹುದ್ದೆಗೆ ನೇಮಿಸಲಾಗುವುದು. ಆಗ ಡಿಎ, ಮನೆ ಬಾಡಿಗೆ ಭತ್ಯೆ, ಮಾಸಿಕ ಭತ್ಯೆ ಹಾಗೂ ಇತರ ಭತ್ಯೆಗಳನ್ನು ನೀಡಲಾಗುವುದು.
ಸೇವಾ ಬಾಂಡ್: ಆಯ್ಕೆಯಾಗಿವ ಅಭ್ಯರ್ಥಿಗಳು ಒಂದು ವರ್ಷದ ತರಬೇತಿ ಪಡೆಯಬೇಕು. ನಂತರ ಸಂಸ್ಥೆಯಲ್ಲಿ 3 ವರ್ಷ ಸೇವೆ ಸಲ್ಲಿಸುವುದಾಗಿ ಸಾಮಾನ್ಯವರ್ಗ, ಇತರ ಹಿಂದುಳಿದ ವರ್ಗ, ಆರ್ಥಿಕವಾಗಿ ದುರ್ಬಲವಾಗಿರುವ ಅಭ್ಯರ್ಥಿಗಳು 2,50,000 ರೂ. ಸೇವಾ ಬಾಂಡ್ ಹಾಗೂ ಎಸ್ಸಿ, ಎಸ್ಟಿ, ಅಂಗವಿಕಲ ಅಭ್ಯರ್ಥಿಗಳು 1,25,000 ರೂ. ಸೇವಾ ಬಾಂಡ್ ನೀಡಬೇಕು.
ಅರ್ಜಿ ಸಲ್ಲಿಸಲು ಕೊನೇ ದಿನ: 15.6.2021
ಅಧಿಸೂಚನೆಗೆ: https://bit.ly/3wzf3UZ
ಮಾಹಿತಿಗೆ: https://careers.powergrid.in