ರಾಯಚೂರಿನ ಬಾಲಕಿಯರ ಸರ್ಕಾರಿ ಪದವಿಪೂರ್ವ ಕಾಲೇಜಿನ ಸಿಇಟಿ ಪರೀಕ್ಷಾ ಕೇಂದ್ರದಲ್ಲಿ ಪರೀಕ್ಷೆ ಬರೆಯುತ್ತಿರುವ ವಿದ್ಯಾರ್ಥಿಗಳು. 
ನ್ಯೂಸ್

ಯುಜಿಸಿಇಟಿ ದಾಖಲೆ ಅಪ್‌ಲೋಡ್‌ ಪ್ರಕ್ರಿಯೆ ಮುಂದೂಡಿಕೆ

suchetana

ಬೆಂಗಳೂರು: ಈಗ ಜಂಟಿ ಪ್ರವೇಶ ಪರೀಕ್ಷೆ (ಜೆಇಇ) ನಡೆಯುತ್ತಿರುವ ಹಿನ್ನೆಲೆಯಲ್ಲಿ ಪದವಿಪೂರ್ವ ಸಾಮಾನ್ಯ ಪ್ರವೇಶ ಪರೀಕ್ಷೆ (ಯುಜಿಸಿಇಟಿ) ದಾಖಲೆಗಳನ್ನು ಅಪ್‌ಲೋಡ್‌ ಮಾಡುವ ಪ್ರಕ್ರಿಯೆಯನ್ನು ಮುಂದೂಡಲಾಗಿದೆ.

ಈ ಕುರಿತು ಟ್ವೀಟ್‌ ಮಾಡಿರುವ ಉಪಮುಖ್ಯಮಂತ್ರಿ ಡಾ. ಅಶ್ವತ್ಥನಾರಾಯಣ ಅವರು, ವಿದ್ಯಾರ್ಥಿಗಳ ಹಿತದೃಷ್ಟಿಯನ್ನು ಗಮನದಲ್ಲಿ ಇಟ್ಟುಕೊಂಡು ಈ ನಿರ್ಧಾರ ತೆಗೆದುಕೊಂಡಿರುವುದಾಗಿ ಹೇಳಿದ್ದಾರೆ.

ಪರಿಷ್ಕೃತ ವೇಳಾಪಟ್ಟಿಯನ್ನು ಇದೇ 5ರಂದು ಪ್ರಕಟಿಸಲಾಗುವುದು ಎಂದು ಅವರು ಸೂಚಿಸಿದ್ದಾರೆ. http://kea.kar.nic.in ಇಲ್ಲಿ ಮಾಹಿತಿ ನೀಡುವ ಮೂಲಕ ವಿದ್ಯಾರ್ಥಿಗಳ ಗಮನಕ್ಕೆ ತರಲಾಗುವುದು ಎಂದು ಅವರು ಹೇಳಿದ್ದಾರೆ.