ನ್ಯೂಸ್

ಕಂಬಕ್ಕೆ ಟ್ಯಾಂಕರ್‌ ಡಿಕ್ಕಿ: ಫ್ರೀ ಡೀಸೆಲ್‌ ತುಂಬಿಸಿಕೊಳ್ಳಲು ಮುಗಿಬಿದ್ದ ಜನ

suchetana

ವಿಜಯನಗರ: ಬೆಳ್ಳಂ‌ ಬೆಳಗ್ಗೆ ಡಿಸೇಲ್ ತುಂಬಿದ  ಟ್ಯಾಂಕರ್‌ ಡಿಕ್ಕಿ ಹೊಡೆದಿರುವ ಘಟನೆ ವಿಜಯನಗರ ಜಿಲ್ಲೆಯ ಹರಪನಹಳ್ಳಿ ತಾಲೂಕಿನ ನಂದಿಬೇವೂರು ಗ್ರಾಮದಲ್ಲಿ ನಡೆದಿದೆ.

ಡಿಸೇಲ್ ತುಂಬಿದ ಲಾರಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದಿದ್ದು, ಸ್ವಲ್ಪದರಲ್ಲಿ ಅನಾಹುತ ತಪ್ಪಿದೆ. ಘಟನೆಯಲ್ಲಿ ಚಾಲಕನಿಗೆ ಗಾಯವಾಗಿದ್ದು, ಅವರನ್ನು ಹರಪನಹಳ್ಳಿ ಸರ್ಕಾರಿ ಆಸ್ಪತ್ರೆಗೆ ಚಿಕಿತ್ಸೆಗೆ ದಾಖಲಿಸಲಾಗಿದೆ.

ವಿದ್ಯುತ್ ಕಂಬಕ್ಕೆ ಲಾರಿ ಡಿಕ್ಕಿ ಹೊಡೆದ ಕೂಡಲೇ ಬೆಸ್ಕಾಂ ಸಿಬ್ಬಂದ್ದಿ ವಿದ್ಯುತ್ ಸಂಪರ್ಕ ಕಡಿತಗೊಳಿಸಿದ್ದಾರೆ. ಇದರಿಂದ ಭಾರಿ ಅನಾಹುತವೊಂದು ತಪ್ಪಿದೆ. ಇನ್ನೂ ಲಾರಿಯಿಂದ ಡಿಸೇಲ್ ಸೋರಿಕೆಯಾಗುತ್ತಲೇ ಡಿಸೇಲ್ ತುಂಬಿಕೊಳ್ಳಲು ಜನ ನಾ ಮುಂದು, ತಾ ಮುಂದು ಎಂದು ಮುಗಿ ಬಿದ್ದು ಡಿಸೇಲ್ ತುಂಬಿಕೊಂಡು ಹೋಗುತ್ತಿದ್ದರು. ಸ್ಥಳಕ್ಕೆ ಪೊಲೀಸರು ಮತ್ತು ಅಗ್ನಿ ಶಾಮಕದಳ ಸಿಬ್ಬಂದಿ ಆಗಮಿಸಿ, ಜನರನ್ನು ಚದುರಿಸಿದ್ದಾರೆ.