ವಿಜಯನಗರ: ವಿವಿಧ ರೀತಿಯ ಮದ್ಯದ ಬಾಟಲಿಗಳನ್ನು ತುಂಬಿಕೊಂಡು ಹೋಗುತ್ತಿದ್ದ ಲಾರಿ ಪಲ್ಟಿ ಹೊಡೆದ ಪರಿಣಾಮವಾಗಿ ರಸ್ತೆಯ ತುಂಬೆಲ್ಲಾ ಮದ್ಯದ ಹೊಳೆ ಹರಿದಿರುವ ಘಟನೆ ವಿಜಯನಗರ ಜಿಲ್ಲೆಯ ಹೊಸಪೇಟೆ ತಾಲೂಕಿನ ತಿಮ್ಮಲಾಪುರದ ರಾ.ಹೆ.50 ರ ಫ್ಲೈ ಓವರ್ ಮೇಲೆ ನಡೆದಿದೆ.
ಇದರಲ್ಲಿ ವಿವಿಧ ಕಂಪೆನಿಗಳ ಮದ್ಯಗಳು ಇದ್ದವು. ಈ ಮದ್ಯದ ಬಾಟಲಿಗಳನ್ನು ಬೆಂಗಳೂರಿನಿಂದ ಬೀದರ್‌ಗೆ ಒಯ್ಯಲಾಗುತ್ತಿತ್ತು.
ನಿದ್ದೆ ಮಂಪರಿನಲ್ಲಿದ್ದ ಚಾಲಕನ ನಿಯಂತ್ರಣ ತಪ್ಪಿದ್ದ ಹಿನ್ನೆಲೆಯಲ್ಲಿ ಲಾರಿ ಪಲ್ಟಿ ಹೊಡೆದಿದೆ. ಸ್ಥಳಕ್ಕೆ ಮರಿಯಮ್ಮನ ಹಳ್ಳಿ ಪೊಲೀಸರು ಮತ್ತು ಅಬಕಾರಿ ಇಲಾಖೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದು, ಇನ್ನಷ್ಟೇ ಮಾಹಿತಿ ಲಭ್ಯವಾಗಬೇಕಿದೆ.