ಕೇರಳ: ಭೀಕರ ರಸ್ತೆ ಅಪಘಾತದಲ್ಲಿ ಇಬ್ಬರು ಶಬರಿಮಲೆ ಯಾತ್ರಾರ್ಥಿಗಳು ಸಾವನ್ನಪ್ಪಿರುವ ಘಟನೆ ಕೇರಳದ ಇಡುಕ್ಕಿ ಜಿಲ್ಲೆಯಲ್ಲಿ ನಡೆದಿದೆ.
ಮೃತರನ್ನು ಕರ್ನೂಲ್ನ ಆದಿ ನಾರಾಯಣನ್ ಮತ್ತು ಈಶ್ವರಪ್ಪ ಎಂದು ಗುರುತಿಸಲಾಗಿದೆ. ಶಬರಿಮಲೆ ಯಾತ್ರಾರ್ಥಿಗಳನ್ನು ಹೊತ್ತೊಯ್ಯುತ್ತಿದ್ದ ಬಸ್ಗೆ ಇಡುಕ್ಕಿಯ ಪೆರುವಂತನಂನಲ್ಲಿ ಮೊದಲು ಸಣ್ಣ ಅಪಘಾತ ಸಂಭವಿಸಿತ್ತು. ಇದರಿಂದ ಬಸ್ಗೆ ಆದ ಹಾನಿಯನ್ನು ನೋಡುತ್ತಾ ಆದಿ ನಾರಾಯಣನ್ ಮತ್ತು ಈಶ್ವರಪ್ಪ ನಿಂತಿದ್ದರು.
ಈ ವೇಳೆ, ವೇಗವಾಗಿ ಬಂದ ಟೆಂಪೋ ಟ್ರಾವೆಲರ್ ವಾಹನವೊಂದು ಲಾರಿಗೆ ಡಿಕ್ಕಿ ಹೊಡೆಯುವುದನ್ನು ತಪ್ಪಿಸಲು ಹೋಗಿ ಇವರಿಬ್ಬರಿಗೆ ಗುದ್ದಿದೆ. ಪರಿಣಾಮವಾಗಿ ಸ್ಥಳದಲ್ಲೇ ಇಬ್ಬರು ಮೃತಪಟ್ಟಿದ್ದಾರೆ. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.