ಚಂಡೀಗಢ: ಕೇಂದ್ರದ ಮಾಜಿ ಸಚಿವೆ ಶಿರೋಮಣಿ ಅಕಾಲಿದಳದ ನಾಯಕಿ ಹರ್ಸಿಮ್ರತ್ ಕೌರ್ ಬಾದಲ್ ಅವರನ್ನು ಚಂಡೀಗಢದ ಪೋಸ್ಟ್ ಗ್ರಾಜುವೇಟ್ ಇನ್ಸ್ಟಿಟ್ಯೂಟ್ ಆಫ್ ಮೆಡಿಕಲ್ ಎಜುಕೇಶನ್ ಆ್ಯಂಡ್ ರಿಸರ್ಚ್ ಗೆ ನಿನ್ನೆ ದಾಖಲಿಸಲಾಗಿತ್ತು. ತೀವ್ರ ಉಸಿರಾಟದ ಸಮಸ್ಯೆ ಕಂಡು ಬಂದ ಕಾರಣ ತತ್ಕ್ಷಣವೇ ಆಸ್ಪತ್ರೆಗೆ ಅವರು ದಾಖಲಾಗಿದ್ದರು.
ನೋವಲ್ ಕರೋನಾ ವೈರಸ್ ಟೆಸ್ಟ್ಗೂ ಅವರನ್ನು ಒಳಪಡಿಸಲಾಗಿದ್ದು, ಫಲಿತಾಂಶ ನೆಗೆಟಿವ್ ಬಂದಿದೆ. ಆಸ್ಪತ್ರೆಗೆ ದಾಖಲಾಗಿದ್ದ ಅವರನ್ನು ಎಮರ್ಜೆನ್ಸಿ ವಾರ್ಡ್ನ ಐಸೋಲೇಷನ್ ರೂಮ್ನಲ್ಲಿ ಉಳಿಸಲಾಗಿತ್ತು. ಅವರ ಆರೋಗ್ಯ ಸ್ಥಿರವಾಗಿ ಕಂಡುಬಂದ ಕಾರಣ, ಉಸಿರಾಟದ ಸಮಸ್ಯೆಗೆ ಸೂಕ್ತ ಚಿಕಿತ್ಸೆ ನೀಡಿರುವ ವೈದ್ಯರು ಅವರನ್ನು ಬಳಿಕ ಕೂಡಲೇ ಬಿಡುಗಡೆ ಮಾಡಿರುವುದಾಗಿ ಆಸ್ಪತ್ರೆ ಮೂಲಗಳು ತಿಳಿಸಿವೆ.
ಹರ್ಸಿಮ್ರತ್ ಕೌರ್ ಅವರು ಕೃಷಿ ಮಸೂದೆ ವಿರೋಧಿಸಿ ಸೆಪ್ಟೆಂಬರ್ ತಿಂಗಳಲ್ಲಿ ಕೇಂದ್ರ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಅಲ್ಲದೆ, ಕೃಷಿ ಮಸೂದೆ ವಿರೋಧಿಸಿ ಶಿರೋಮಣಿ ಅಕಾಲಿದಳ ಎನ್ಡಿಎ ಮೈತ್ರಿಕೂಟದಿಂದ ಹೊರಬಿದ್ದಿದೆ. (ಏಜೆನ್ಸೀಸ್)