Saif Ali Khan Stabbing Case ನಟ ಸೈಫ್ ಅಲಿ ಖಾನ್ (Saif Ali Khan) ಮೇಲಿನ ಮಾರಣಾಂತಿಕ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಆರೋಪಿಯನ್ನು ಥಾಣೆಯಲ್ಲಿ ಬಂಧಿಸಿ ವಿಚಾರಣೆಗೆ ಒಳಪಡಿಸಿದ್ದಾರೆ. ಇತ್ತ ಪೊಲೀಸರು ತನಿಖೆಯನ್ನು ಚುರುಕುಗೊಳಿಸುತ್ತಿದ್ದಂತೆ ಹೊಸ ವಿಚಾರಗಳು ಹೊರಬರುತ್ತಿದ್ದು, ನಟನ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ್ದ ಆರೋಪಿ ಬಾಂಗ್ಲಾದೇಶದ ಪ್ರಜೆ ಎಂದು ಹೇಳಲಾಗಿತ್ತು. ಆದರೆ, ಆರೋಪಿ ಪರ ವಕೀಲ ಇದನ್ನು ತಳ್ಳಿ ಹಾಕಿದ್ದಾರೆ.
''ನಟ ಸೈಪ್ ಅಲಿ ಖಾನ್ ಅವರ ಮೇಲಿನ ಮಾರಣಾಂತಿಕ ಹಲ್ಲೆ ಹಾಗೂ ಅವರ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯನ್ನು ಬಂಧಿಸಲಾಗಿದೆ. ಬಂಧಿತ ಆರೋಪಿ ಹೆಸರು ಮೊಹಮ್ಮದ್ ಶರೀಫುಲ್ ಇಸ್ಲಾಂ ಶೆಹಜಾದ್ ಎಂದು ತಿಳಿದು ಬಂದಿದ್ದು, ಈತ ಬಾಂಗ್ಲಾದೇಶದ ಪ್ರಜೆ ಎಂಬುದು ವಿಚಾರಣೆ ವೇಳೆ ತಿಳಿದು ಬಂದಿದೆ ಎಂದು ಮುಂಬೈ ಡಿಸಿಪಿ ದೀಕ್ಷಿತ್ ಗೆಡಮ್ ಭಾನುವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದರು.''
ಇದನ್ನೂ ಓದಿ: ಯತ್ನಾಳ್, ರಮೇಶ್ ಜಾರಕಿಹೊಳಿಗೆ ಉಚ್ಚಾಟಿಸಲಿ: ಮಾಜಿ ಸಚಿವರಿಬ್ಬರ ಒತ್ತಾಯ | Complaint to BJP high command
ಆರೋಪಿ ಇತ್ತೀಚೆಗೆ ಮುಂಬೈನಲ್ಲಿ ನೆಲೆಸಿದ್ದಾನೆ ಎಂದು ವಕೀಲರು ನಿರಾಕರಿಸಿದ್ದಾರೆ. ಶೆಹಜಾದ್ ಏಳು ವರ್ಷಗಳಿಂದ ಮುಂಬೈನಲ್ಲಿ ವಾಸಿಸುತ್ತಿದ್ದಾರೆ. ಆದರೆ, ಈ ಬಗ್ಗೆ ಮುಂಬೈ ಪೊಲೀಸರ ಬಳಿ ಯಾವುದೇ ಯಾವುದೇ ಪುರಾವೆಗಳಿಲ್ಲ ಎಂದು ಶೆಹಜಾದ್ ಪರ ವಕೀಲ ಸಂದೀಪ್ ಶೇಖಾನ ಎಎನ್ಐ ಸುದ್ದಿ ಸಂಸ್ಥೆಗೆ ತಿಳಿಸಿದ್ದಾರೆ.
5 ದಿನಗಳ ಕಾಲ (ಆರೋಪಿಯ) ಪೊಲೀಸ್ ಕಸ್ಟಡಿಗೆ ನೀಡಲಾಗಿದೆ. 5 ದಿನಗಳಲ್ಲಿ ವರದಿ ಸಲ್ಲಿಸುವಂತೆ ನ್ಯಾಯಾಲಯ ಪೊಲೀಸರಿಗೆ ಹೇಳಿದೆ. ಅವರು ಬಾಂಗ್ಲಾದೇಶಿ ಎಂಬುದಕ್ಕೆ ಪೊಲೀಸರ ಬಳಿ ಯಾವುದೇ ಪುರಾವೆಗಳಿಲ್ಲ. ಅವರು 6 ತಿಂಗಳ ಹಿಂದೆ ಇಲ್ಲಿಗೆ ಬಂದಿದ್ದರು ಎಂಬುವುದು ತಪ್ಪು ಹೇಳಿಕೆಯಾಗಿದ್ದು, ಅವರು 7 ವರ್ಷಗಳಿಗೂ ಹೆಚ್ಚು ಕಾಲ ಇಲ್ಲಿ ವಾಸಿಸುತ್ತಿದ್ದಾರೆ. ಇದು 43A ನ ಸ್ಪಷ್ಟ ಉಲ್ಲಂಘನೆಯಾಗಿದೆ. ಸೂಕ್ತ ತನಿಖೆ ನಡೆಸಿಲ್ಲ ಎಂದು ವಕೀಲ ಸಂದೀಪ್ ಶೇಖಾನ ಆರೋಪಿಸಿದ್ದಾರೆ.(ಏಜೆನ್ಸೀಸ್)