ಹೈದರಾಬಾದ್: ಡಿ.04ರಂದು ಸಂಧ್ಯಾ ಚಿತ್ರಮಂದಿರಲ್ಲಿ ನಡೆದ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಪಟ್ಟಂತೆ ಮಂಗಳವಾರ(ಡಿ.24) ನಟ ಅಲ್ಲು ಅರ್ಜುನ್(Allu Arjun) ಚಿಕ್ಕಡಪಲ್ಲಿ ಪೊಲೀಸ್ ಠಾಣೆಗೆ ವಿಚಾರಣೆಗೆ ಹಾಜರಾಗಿದ್ದಾರೆ.
ಕಾಲ್ತುಳಿತ ಪ್ರಕರಣದಲ್ಲಿ 35 ವರ್ಷದ ರೇವತಿ ಎಂಬುವರು ಮೃಪಟ್ಟಿದ್ದರು. ಈ ಕುರಿತು ವಿಚಾರಣೆ ಡಿ.24ರಂದು ಹಾಜರಾಗಿ ತನಿಖೆ ಸಹಕರಿಸುವಂತೆ ಹೈದರಾಬಾದ್ ಪೊಲೀಸರು ಸೋಮವಾರ(ಡಿ.23) ನೋಟಿಸ್ ಜಾರಿ ಮಾಡಿದ್ದರು. ಈ ಹಿನ್ನಲೆ ನಟ ಅಲ್ಲು ಠಾಣೆಗೆ ಆಗಮಿಸಿದ್ದಾರೆ.
ಈ ಪ್ರಕರಣಕ್ಕೆ ಸಂಬಂಧಪಟ್ಟಂತೆ ನಟ ಅಲ್ಲು ಅರ್ಜುನ್, ಅವರ ಭದ್ರತಾ ತಂಡ ಮತ್ತು ಚಿತ್ರಮಂದಿರ ಮಾಲೀಕರ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದರು. ಈ ಹಿನ್ನೆಲೆ ಡಿ.13ರಂದು ನಟನ್ನು ಬಂಧಿಸಲಾಗಿತ್ತು. ಅದೇ ದಿನ ತೆಲಂಗಾಣ ಹೈಕೋರ್ಟ್ ನಾಲ್ಕು ವಾರಗಳ ಮಧ್ಯಂತರ ಜಾಮೀನಿ ಮಂಜೂರು ಮಾಡಿತ್ತು. ಡಿ.14ರಂದು ಬೆಳಗ್ಗೆ ಜೈಲಿನಿಂದ ಬಿಡುಗಡೆಗೊಂಡಿದ್ದರು.
ಇದನ್ನೂ ಓದಿ: ಬಾಕ್ಸಿಂಗ್ ಡೇ ಟೆಸ್ಟ್ ಆರಂಭಕ್ಕೂ ಮುನ್ನ ಆಸ್ಟ್ರೇಲಿಯಾಗೆ ಬಿಗ್ ಶಾಕ್: ಭಾರತಕ್ಕೆ ಪ್ಲಸ್ ಪಾಯಿಂಟ್..! Team India
ಇನ್ನು ಸಂತ್ರಸ್ತ ಕುಟುಂಬಕ್ಕೆ ನಟ ಅಲ್ಲು ಅರ್ಜುನ್ 25 ಲಕ್ಷ ರೂ. ಘೋಷಿಸಿದ್ದಾರೆ. ಅಲ್ಲದೆ, ಚಿತ್ರತಂಡದಿಂದ 50 ಲಕ್ಷ ರೂ. ಅರ್ಥಿಕ ನೆರವು ನೀಡಿದ್ದಾರೆ. ಇದೆಲ್ಲದರ ನಡುವೆ ಉಸ್ಮಾನಿಯ ವಿಶ್ವವಿದ್ಯಾಲಯದ ಕೆಲ ಸದಸ್ಯರು ಸಂತ್ರಸ್ತೆಗೆ 1 ಕೋಟಿ ರೂ. ನೀಡುವಂತೆ ಒತ್ತಾಯಿಸಿ ಅಲ್ಲು ಮನೆ ಮೇಲೆ ದಾಳಿ ಮಾಡಿದ್ದರು. ಬಳಿಕ ಈ ದಾಳಿ ಪ್ರಕರಣದಲ್ಲಿ 8 ಜನರನ್ನು ಬಂಧಿಸಿದ್ದು, ಜಾಮೀನಿನ ಮೇಲೆ ಹೊರ ಬಂದಿದ್ದಾರೆ,(ಏಜೆನ್ಸೀಸ್).