ನ್ಯೂಸ್

ನಿರ್ಭಯಾ ಸಾಮೂಹಿಕ ಅತ್ಯಾಚಾರ ಕೇಸು: ದೆಹಲಿ ಹೈಕೋರ್ಟ್​ ತೀರ್ಪು ಪ್ರಶ್ನಿಸಿ ಸಲ್ಲಿಕೆಯಾಗಿರುವ ಅರ್ಜಿ ವಿಚಾರಣೆ ನಡೆಸಲಿರುವ ಸುಪ್ರೀಂ ಕೋರ್ಟ್​

ನವದೆಹಲಿ: ನಿರ್ಭಯಾ ಪ್ರಕರಣದ ಆಪರಾಧಿಗಳ ಗಲ್ಲು ಶಿಕ್ಷೆ ವಿಚಾರವಾಗಿ ದೆಹಲಿ ಹೈಕೋರ್ಟ್​ ನೀಡಿರುವ ತೀರ್ಪು ಪ್ರಶ್ನಿಸಿ ಸಲ್ಲಿಕೆಯಾಗಿರುವ ಅರ್ಜಿಯನ್ನು ಸುಪ್ರೀಂಕೋರ್ಟ್​ ಇಂದು ವಿಚಾರಣೆ ನಡೆಸಲಿದೆ.

ದೆಹಲಿ ಹೈಕೋರ್ಟ್​ ನೀಡಿರುವ ತೀರ್ಪನ್ನು ಪ್ರಶ್ನಿಸಿ ಕೇಂದ್ರ ಸರ್ಕಾರ ಸುಪ್ರೀಂಕೋರ್ಟ್​ಗೆ ಅರ್ಜಿ ಸಲ್ಲಿಸಿದೆ. ಅರ್ಜಿಯನ್ನು ಕೋರ್ಟ್​ ಇಂದು ವಿಚಾರಣೆ ನಡೆಸಲಿದೆ.

ಸುಪ್ರೀಂಕೋರ್ಟ್​ನಲ್ಲಿ ನಡೆಯುವ ವಿಚಾರಣೆಯಲ್ಲಿ ಅಂತಿಮ ತೀರ್ಪು ನಮ್ಮ ಪರ ಬರಲಿದೆ. ಸುಪ್ರೀಂಕೋರ್ಟ್​ ಅಪರಾಧಿಗಳನ್ನು ಶೀಘ್ರದಲ್ಲೇ ಗಲ್ಲಿಗೇರಿಸುವಂತೆ ತೀರ್ಪು ನೀಡುವ ನಿರೀಕ್ಷೆ ಇದೆ. ಕೋರ್ಟ್​ ಬಗ್ಗೆ ನಮಗೆ ನಂಬಿಕೆ ಇದೆ ಎಂದು ನಿರ್ಭಯಾ ಪ್ರಕರಣದ ಸಂತ್ರಸ್ತೆ ತಾಯಿ ಆಶಾ ದೇವಿ ಹೇಳಿದ್ದಾರೆ. (ಏಜೆನ್ಸೀಸ್​)