ನ್ಯೂಸ್

ಮೇಯರ್ ಸುಧೀರ್ ಶೆಟ್ಟಿ ಅವರಿಗೆ ಎಸ್‌ಸಿಡಿಸಿಸಿ ಬ್ಯಾಂಕ್ ವತಿಯಿಂದ ಸನ್ಮಾನ

Mangaluru - Hariprasad Rai



ಮಂಗಳೂರು : ಮಂಗಳೂರು ಮಹಾನಗರ ಪಾಲಿಕೆಯ ನೂತನ ಮೇಯರ್ ಸುಧೀರ್ ಶೆಟ್ಟಿ ಕಣ್ಣೂರು ಅವರನ್ನು ಶನಿವಾರ
ಎಸ್‌ಸಿಡಿಸಿಸಿ ಬ್ಯಾಂಕ್‌ನಲ್ಲಿ ಸನ್ಮಾನಿಸಲಾಯಿತು.
ಎಸ್‌ಸಿಡಿಸಿಸಿ ಬ್ಯಾಂಕ್‌ನ ಅಧ್ಯಕ್ಷ ಡಾ.ಎಂ.ಎನ್.ರಾಜೇಂದ್ರ ಕುಮಾರ್ ಅವರು ಸನ್ಮಾನ ನೆರವೇರಿಸಿದರು. ಮಂಗಳೂರು ಮಹಾನಗರ ಪಾಲಿಕೆಯ ಹಿರಿಯ ಕಾರ್ಪೋರೇಟರ್ ಆಗಿರುವ ಸುಧೀರ್ ಶೆಟ್ಟಿ ಅವರು ಜನಸೇವೆಯಲ್ಲಿ ಜನ ಮೆಚ್ಚುಗೆಯನ್ನು ಗಳಿಸಿದ್ದಾರೆ. ಮೇಯರ್ ಆಗಿಯೂ ಅವರು ಉತ್ತಮ ಕಾರ್ಯನಿರ್ವಹಣೆಯೊಂದಿಗೆ ಅಪಾರ ಜನಮನ್ನಣೆ ಗಳಿಸಲಿ ಎಂದು ಡಾ.ಎಂ.ಎನ್.ರಾಜೇಂದ್ರ ಕುಮಾರ್ ಶುಭ ಹಾರೈಸಿದರು.
ಬ್ಯಾಂಕಿನ ನಿರ್ದೇಶಕ ಶಶಿಕುಮಾರ್ ರೈ ಬಾಲ್ಯೊಟ್ಟು, ಸ್ಕಾೃಡ್ಸ್‌ನ ನಿಕಟಪೂರ್ವ ಅಧ್ಯಕ್ಷ ರವೀಂದ್ರ ಕಂಬಳಿ , ಬ್ಯಾಂಕಿನ ಸಿಇಒ ಗೋಪಾಲಕೃಷ್ಣ ಭಟ್ ಉಪಸ್ಥಿತರಿದ್ದರು.