ನ್ಯೂಸ್

ಜೈವಿಕ ವಿಜ್ಞಾನ ವಸ್ತು ಪ್ರದರ್ಶನದಲ್ಲಿ ಸರ್ಕಾರಿ ಶಾಲೆ ಮಕ್ಕಳಿಗೆ ಪ್ರಥಮ ಸ್ಥಾನ

Haveri - Kariyappa Aralikatti

ರಾಣೆಬೆನ್ನೂರ: ತಾಲೂಕಿನ ಕವಲೆತ್ತು ಗ್ರಾಮದ ಶ್ರೀ ದುರ್ಗಾ ಮಾತಾ ಪ್ರೌಢಶಾಲೆಯಲ್ಲಿ ಇತ್ತೀಚೆಗೆ ಆಯೋಜಿಸಿದ್ದ ತಾಲೂಕು ಮಟ್ಟದ ವಿಜ್ಞಾನ ವಸ್ತು ಪ್ರದರ್ಶನ ಮೇಳದಲ್ಲಿ ತಾಲೂಕಿನ ಚೌಡಯ್ಯದಾನಪುರ ಗ್ರಾಮದ ಸರ್ಕಾರಿ ಪ್ರೌಢಶಾಲೆಯ ವಿದ್ಯಾರ್ಥಿಗಳಾದ ವಿಜಯ ಬಸಾಪುರ, ಪುಟ್ಟಪ್ಪ ಹೊನ್ನತ್ತಿ, ದೀಪಕ ಉಪ್ಪಿನ ಹಾಗೂ ಮಾಲತೇಶ ಹೊನ್ನತ್ತಿ ಜೈವಿಕ ವಿಜ್ಞಾನ ವಿಭಾಗದಲ್ಲಿ ಪ್ರಥಮ ಸ್ಥಾನಗಳಿಸಿದ್ದಾರೆ ಎಂದು ಶಾಲೆಯ ಮುಖ್ಯಶಿಕ್ಷಕ ವಿಜಯ ಪೂಜಾರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.