ನ್ಯೂಸ್

VIDEO| ಕುಸ್ತಿಪಟುಗಳ ಪ್ರತಿಭಟನೆಗೆ ಬೆಂಬಲ ಸೂಚಿಸುವ ಸಭೆಯಲ್ಲಿ ಮಾತಿನ ಚಕಮಕಿ

Webdesk - Manjunatha B

ಚಂಡೀಗಢ: ಭಾರತೀಯ ಕುಸ್ತಿ ಫೆಡರೇಷನ್​ನ ಮಾಜಿ ಅಧ್ಯಕ್ಷ, ಬಿಜೆಪಿ ಸಂಸದ ಬ್ರಿಜ್​ ಭೂಷಣ್​ ಶರಣ್​ ಸಿಂಗ್, ಮಹಿಳಾ ಕುಸ್ತಿಪಟುಗಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂದು ಆರೋಪಿಸಿ ಹಲವು ದಿನಗಳಿಂದ ದೇಶಾದ್ಯಂತ ಪ್ರತಿಭಟನೆ ನಡೆಯುತ್ತಿದೆ.

ಮಹಿಳಾ ಕುಸ್ತಿಪಟುಗಳಿಗೆ ಕ್ರೀಡಾ ಕ್ಷೇತ್ರದ ಗಣ್ಯರು, ರಾಜಕೀಯ ನಾಯಕರು, ರೈತ ಸಂಘಟನೆಗಳು ಬೆಂಬಲ ಘೋಷಿಸಿದ್ದು ಪ್ರತಿಭಟನಾ ನಿರತರ ಜೊತೆ ದನಿ ಗೂಡಿಸಿದ್ದಾರೆ.

ರಾಷ್ಟ್ರಪತಿಗಳಿಗೆ ದೂರು

ಇನ್ನು ಪ್ರತಿಭಟನಾ ನಿರತ ಕುಸ್ತಿಪಟುಗಳಿಗೆ ಬೆಂಬಲ ಸೂಚಿಸುವ ಕುರಿತಾಗಿ ನಡೆದ ಸಭೆಯಲ್ಲಿ ಪಂಚಾಯತ್​ ಸದಸ್ಯರ ನಡುವೆ ಮಾತಿನ ಚಕಮಕಿ ನಡೆದಿರುವ ಘಟನೆ ಹರಿಯಾಣದ ಕುರುಕ್ಷೇತ್ರ ಜಿಲ್ಲೆಯ ಖಾಪ್​ ಎಂಬ ಪ್ರದೇಶದಲ್ಲಿ ನಡೆದಿದೆ. ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿರುವ ವಿಡಿಯೋದಲ್ಲಿ ಸದಸ್ಯರು ಮಾತಿನ ಯುದ್ದದಲ್ಲಿ ತೊಡಗಿರುವುದು ಕಂಡು ಬರುತ್ತದೆ.

ಪಂಚಾಯತ್​ ಸದಸ್ಯರ ನಡುವಿನ ಗಲಾಟೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಸಭೆಯಲ್ಲಿ ಸುಮಾರು 50ಕ್ಕೂ ಹೆಚ್ಚು ಸದಸ್ಯರು ಭಾಗಿಯಾಗಿದ್ದರು ಮತ್ತು ಪ್ರತಿಭಟನಾ ನಿರತ ಕುಸ್ತಿಪಟುಗಳಿಗೆ ಬೆಂಬಲವನ್ನು ಸೂಚಿಸಿದ್ದಾರೆ. ಕುಸ್ತಿ ಫೆಡರೇಷನ್​ ಅಧ್ಯಕ್ಷ, ಬಿಜಪೆಇ ಸಂಸದ ಬ್ರಿಜ್​ ಭೂಷಣ್​ ಶರಣ್​ ಸಿಂಗ್ ವಿರುದ್ಧ ರಾಷ್ಟ್ರಪತಿಯನ್ನು ಭೇಟಿ ಮಾಡಿ ದೂರು ನೀಡುವ ಬಗ್ಗೆ ಸಭೆಯಲ್ಲಿ ತೀರ್ಮಾನಿಸಲಾಗಿದೆ.