ನ್ಯೂಸ್

ದೇವರಾದಲ್ಲಿ ಒಟ್ಟಿಗೆ ಇಬ್ಬರು ಬಾಲಿವುಡ್​ ಖಳನಟರು!

Webdesk - Narayanaswamy

ಹೈದರಾಬಾದ್​: ಜೂನಿಯರ್ ಎನ್‌ಟಿಆರ್‌ನ ದೇವರ ಚಿತ್ರ ಸೆಪ್ಟೆಂಬರ್‌ನಲ್ಲಿ ಬಿಡುಗಡೆಯಾಗಲಿದೆ ಎನ್ನಲಾಗುತ್ತಿದ್ದು, ಬಾಲಿವುಡ್ ಜನಪ್ರಿಯ ನಟ ಈ ಚಿತ್ರದಲ್ಲಿ ವಿಲನ್ ಪಾತ್ರದಲ್ಲಿ ಕಾಣಿಸಿಕೊಳ್ಳುವ ಸಾಧ್ಯತೆ ಇದೆ ಎಂದು ವರದಿಯಾಗಿದೆ.

ದೇವರ ಎರಡು ಭಾಗಗಳಲ್ಲಿ ತೆರೆಗೆ ಬರಲಿದ್ದು, ಈ ಸಿನಿಮಾದ ಮೊದಲ ಭಾಗ ಇದೇ ಸೆಪ್ಟೆಂಬರ್ 27ಕ್ಕೆ ಬಿಡುಗಡೆಯಾಗಲಿದೆ. ಈ ಚಿತ್ರದಲ್ಲಿ ಬಾಲಿವುಡ್ ಬೆಡಗಿ ಜಾಹ್ನವಿ ಕಪೂರ್ ನಾಯಕಿಯಾಗಿ ನಟಿಸುತ್ತಿದ್ದಾರೆ. ಜನತಾ ಗ್ಯಾರೇಜ್‌ನಂತಹ ಸೂಪರ್ ಹಿಟ್ ಸಿನಿಮಾದ ನಂತರ ಎನ್‌ಟಿಆರ್ ಮತ್ತು ಕೊರಟಾಲ ಕಾಂಬಿನೇಷನ್​ನಲ್ಲಿ ಬರುತ್ತಿರುವ ಎರಡನೇ ಸಿನಿಮಾ ಇದಾಗಿದೆ. ಈ ಸಿನಿಮಾದ ಮೇಲೆ ಭಾರೀ ನಿರೀಕ್ಷೆಗಳಿವೆ.

ಇತ್ತೀಚಿನ ಮಾಹಿತಿಯ ಪ್ರಕಾರ, ಈ ಚಿತ್ರದಲ್ಲಿ ವಿಲನ್ ಪಾತ್ರಕ್ಕೆ ಖ್ಯಾತ ಬಾಲಿವುಡ್ ನಟ ಬಾಬಿ ಡಿಯೋಲ್ ಅವರನ್ನು ಆಯ್ಕೆ ಮಾಡಲಾಗುತ್ತಿದೆ ಎಂದು ವರದಿಯಾಗಿದೆ. ಈ ಸಿನಿಮಾದಲ್ಲಿ ಈಗಾಗಲೇ ಬಾಲಿವುಡ್ ನಟ ಸೈಫ್ ಅಲಿ ಖಾನ್ ವಿಲನ್ ಪಾತ್ರದಲ್ಲಿ ನಟಿಸುತ್ತಿರುವುದು ಗೊತ್ತೇ ಇದೆ. ಇದೀಗ ಬಾಬಿ ಡಿಯೋಲ್ ಹೆಸರು ಹೊರಬಿದ್ದಿದ್ದು, ಸೈಫ್ ಅಲಿ ಖಾನ್ ಬದಲಿಗೆ ಬಾಬಿ ಡಿಯೋಲ್ ಗೆ ಅವಕಾಶ ನೀಡಲಾಯ್ತೇ ಎಂಬ ಕಾಮೆಂಟ್‌ಗಳು ಕೂಡ ಕೇಳಿ ಬಂದಿವೆ.

ಆದರೆ ಇತ್ತೀಚಿನ ಮಾಹಿತಿ ಪ್ರಕಾರ ಈ ಸಿನಿಮಾದಲ್ಲಿ ಬಾಬಿ ಡಿಯೋಲ್ ಎರಡನೇ ವಿಲನ್ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಸದ್ಯ ಚಿತ್ರ ತಂಡ ಬಾಬಿ ಡಿಯೋಲ್ ಜೊತೆ ಮಾತುಕತೆ ನಡೆಸುತ್ತಿದೆ ಎಂದು ವರದಿಯಾಗಿದೆ. ಆದರೆ ಇನ್ನೂ ಅಧಿಕೃತ ಘೋಷಣೆ ಹೊರಬಿದ್ದಿಲ್ಲ.