ಸಾಂದರ್ಭಿಕ ಚಿತ್ರ 
ನ್ಯೂಸ್

ಇಂದಿನಿಂದ ದ್ವಿತೀಯ ಪಿಯುಸಿ ಪರೀಕ್ಷೆ ಆರಂಭ; ವಿದ್ಯಾರ್ಥಿಗಳು ಪಾಲಿಸಲೇಬೇಕಾದ ಕಡ್ಡಾಯ ನಿಯಮಗಳಿವು!

ಬೆಂಗಳೂರು: 2024-25 ಶೈಕ್ಷಣಿಕ ಸಾಲಿನ ದ್ವಿತೀಯ ಪಿಯುಸಿ (PUC) ಪರೀಕ್ಷೆ ಇಂದಿನಿಂದ (ಮಾರ್ಚ್ 01) ಆರಂಭವಾಗಿದ್ದು, ಮಾರ್ಚ್ 20ರವರೆಗೆ ನಡೆಯಲಿದೆ. ರಾಜ್ಯದ 1171 ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದ್ದು, 76 ಉತ್ತರ ಪತ್ರಿಕೆ ಮೌಲ್ಯಮಾಪನ ಕೇಂದ್ರಗಳು ಹಾಗೂ 31,000 ಶಿಕ್ಷಕರನ್ನ ಕರ್ತವ್ಯಕ್ಕೆ ನಿಯೋಜಿಸಲಾಗಿದೆ. ಶಿಕ್ಷಣ ಇಲಾಖೆ ಮತ್ತು ಎಕ್ಸಾಂ ಬೋರ್ಡ್ ಪರೀಕ್ಷೆಗೆ ಸಕಲ ಸಿದ್ಧತೆ ಮಾಡಿಕೊಂಡಿದೆ.

7,13,862 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದು, 6,61,474 ಹೊಸ ವಿದ್ಯಾರ್ಥಿಗಳು, 34,071 ಪುನರಾವರ್ತಿತ ವಿದ್ಯಾರ್ಥಿಗಳು, 18,317 ಖಾಸಗಿ ವಿದ್ಯಾರ್ಥಿಗಳು ದ್ವಿತೀಯ ಪಿಯುಸಿ (PUC) ಪರೀಕ್ಷೆ ಬರೆಯಲಿದ್ದಾರೆ.

ಪರೀಕ್ಷಾ ಅಕ್ರಮ ತಡೆಗೆ ಮೊದಲ ಬಾರಿಗೆ ವೆಬ್ ಕಾಸ್ಟಿಂಗ್ ಕಣ್ಗಾವಲು ಇರಲಿದ್ದು, ಪರೀಕ್ಷಾ ಕೊಠಡಿಯೊಳಗೆ ಸಿಸಿಟಿವಿ ಕ್ಯಾಮೆರಾಗಳನ್ನು ಅಳವಡಿಸಲಾಗಿದೆ. ಮೊಬೈಲ್, ಎಲೆಕ್ಟ್ರಾನಿಕ್ ವಾಚ್, ಕ್ಯಾಲುಕೇಟರ್ ನಿಷೇಧಿಸಲಾಗಿದೆ. ಪರೀಕ್ಷಾ ಕೇಂದ್ರಗಳ ಸುತ್ತ 200 ಮೀಟರ್ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿ ಮಾಡಾಲಾಗಿದೆ. ವಿದ್ಯಾರ್ಥಿಗಳು ಪರೀಕ್ಷಾ ಪ್ರವೇಶ ಪತ್ರವನ್ನು ತೋರಿಸಿ ಬಿಎಂಟಿಸಿ ಹಾಗೂ ಕೆಎಸ್​ಆರ್​ಟಿಸಿ ಸಾಮಾನ್ಯ ಬಸ್​ಗಳಲ್ಲಿ ಉಚಿತವಾಗಿ ಪ್ರಯಾಣಿಸಲು ಅವಕಾಶವನ್ನು ರಾಜ್ಯ ಸರ್ಕಾರ ಮಾಡಿಕೊಟ್ಟಿದೆ.

ದ್ವೀತಿಯ ಪಿಯುಸಿ ಪರೀಕ್ಷೆ-1 ವೇಳಾಪಟ್ಟಿ

  • ಮಾರ್ಚ್ 1- ಕನ್ನಡ, ಅರೇಬಿಕ್.
  • ಮಾರ್ಚ್ 3- ಗಣಿತ, ಶಿಕ್ಷಣ ಶಾಸ್ತ್ರ, ತರ್ಕಶಾಸ್ತ್ರ, ವ್ಯವಹಾರ ಅಧ್ಯಯನ
  • ಮಾರ್ಚ್ 4- ತಮಿಳು, ತೆಲುಗು, ಮಲಯಾಳಂ, ಮರಾಠಿ, ಉರ್ದು, ಸಂಸ್ಕೃತ, ಫ್ರೆಂಚ್.
  • ಮಾರ್ಚ್ 5- ರಾಜ್ಯಶಾಸ್ತ್ರ, ಸಂಖ್ಯಾಶಾಸ್ತ್ರ.
  • ಮಾರ್ಚ್ 7- ಇತಿಹಾಸ, ಭೌತಶಾಸ್ತ್ರ
  • ಮಾರ್ಚ್-10- ಐಚ್ಛಿಕ ಕನ್ನಡ, ಲೆಕ್ಕಶಾಸ್ತ್ರ, ಭೂಗರ್ಭ ಶಾಸ್ತ್ರ, ಗೃಹ ವಿಜ್ಞಾನ.
  • ಮಾರ್ಚ್ 12- ಮನಃಶಾಸ್ತ್ರ, ರಸಾಯನಶಾಸ್ತ್ರ, ಮೂಲ ಗಣಿತ.
  • ಮಾರ್ಚ್ 13- ಅರ್ಥಶಾಸ್ತ್ರ
  • ಮಾರ್ಚ್ 15- ಇಂಗ್ಲೀಷ್
  • ಮಾರ್ಚ್ 17- ಭೂಗೋಳಶಾಸ್ತ್ರ.
  • ಮಾರ್ಚ್ 18- ಜೀವಶಾಸ್ತ್ರ, ಸಮಾಜಶಾಸ್ತ್ರ, ವಿದ್ಯುನ್ಮಾನಶಾಸ್ತ್ರ, ಗಣಕ ವಿಜ್ಞಾನ
  • ಮಾರ್ಚ್ 19- ಹಿಂದೂಸ್ತಾನಿ ಸಂಗೀತ, ಮಾಹಿತಿ ತಂತ್ರಜ್ಞಾನ, ರಿಟೇಲ್, ಆಟೋ ಮೊಬೈಲ್, ಹೆಲ್ತ್ ಕೇರ್, ಬ್ಯೂಟಿ ಅಂಡ್ ವೆಲ್ ನೆಸ್
  • ಮಾರ್ಚ್ 20- ಹಿಂದಿ

ಪರೀಕ್ಷಾ ನಿಯಮಗಳು?

  • ಪರೀಕ್ಷಾ ದಿನದಂದು ಪರೀಕ್ಷಾ ಕೇಂದ್ರದ 200 ಮೀಟರ್ ನಿಷೇಧಾಜ್ಞೆ.
  • ಪಿಯುಸಿ ಎಕ್ಸಾಂ ಎಲ್ಲಾ ಕೇಂದ್ರಗಳಲ್ಲೂ ಸಿಸಿ ಕ್ಯಾಮರಾ, ವೆಬ್ ಕ್ಯಾಸ್ಟಿಂಗ್ ವ್ಯವಸ್ಥೆ ಇರಲಿದೆ.
  • ಪರೀಕ್ಷಾ ಕೇಂದ್ರದ ಸುತ್ತ ಜೆರಾಕ್ಸ್, ಸೈಬರ್ ಸೆಂಟರ್, ಕಂಪ್ಯೂಟರ್ ಸೆಂಟರ್ ಮುಚ್ಚಬೇಕು.
  • ಎಲ್ಲಾ ಪರೀಕ್ಷಾ ಕೇಂದ್ರಗಳಲ್ಲಿ ಪೊಲೀಸ್ ಭದ್ರತೆ ವ್ಯವಸ್ಥೆ.
  • ಪ್ರಶ್ನೆ ಪತ್ರಿಕೆ ಲೀಕ್ ಮಾಡುವ, ಅಕ್ರಮ ಮಾಡುವವರ ವಿರುದ್ಧ ಕ್ರಮ.
  • ಪ್ರಶ್ನೆ ಪತ್ರಿಕೆ ರವಾನೆ ಮಾಡೋದ್ರೀಂದ ಹಿಡಿದು ಪರೀಕ್ಷಾ ಕೇಂದ್ರಕ್ಕೆ ತೆರಳೋವರೆಗೂ ಕ್ಯಾಮೆರಾ ರೆಕಾರ್ಡ್.
  • ಪರೀಕ್ಷಾ ಕೇಂದ್ರಕ್ಕೆ ವಿದ್ಯಾರ್ಥಿಗಳಿಗೆ ಸ್ಮಾರ್ಟ್ ವಾಚ್, ಎಲೆಕ್ಟ್ರಾನಿಕ್ ಉಪಕರಣಗಳು ನಿಷೇಧ.