ನ್ಯೂಸ್

ಶೌಚಾಲಯದಲ್ಲಿ ಮಹಿಳೆಯ ರಹಸ್ಯ ಚಿತ್ರೀಕರಣ; ಇನ್ಫೋಸಿಸ್ ಉದ್ಯೋಗಿಯ ಬಂಧನ | infosys-employee

ರಹಸ್ಯವಾಗಿ ಮಹಿಳಾ ಉದ್ಯೋಗಿ ವಿಡಿಯೋ ರೆಕಾರ್ಡ್ ಮಾಡುತ್ತಿದ್ದ ಆರೋಪದ ಮೇರೆಗೆ ಆರೋಪಿಯನ್ನ ಎಲೆಕ್ಟ್ರಾನಿಕ್ ಸಿಟಿ ಪೊಲೀಸರು ಬಂಧಿಸಿದ್ದಾರೆ. ಹೆಲಿಕ್ಸ್ ವಿಭಾಗದಲ್ಲಿ ಹಿರಿಯ ಅಸೋಸಿಯೇಟ್ ಕನ್ಸಲ್ಟೆಂಟ್ ಆಗಿ ಕೆಲಸ ಮಾಡುತ್ತಿರುವ ಇನ್ಫೋಸಿಸ್ ಉದ್ಯೋಗಿ ಸ್ವಪ್ನಿಲ್ ನಾಗೇಶ್ ಮಾಲಿ ಬಂಧನಕ್ಕೊಳಗಾದ ಆರೋಪಿಯಾಗಿದ್ದಾನೆ.

ಬೆಂಗಳೂರು:ಮಹಿಳಾ ಉದ್ಯೋಗಿ ಶೌಚಾಲಯಕ್ಕೆ ಹೋಗಿದ್ದಾಗ ವಿಡಿಯೋ ಚಿತ್ರೀಕರಣ ಮಾಡುತ್ತಿದ್ದ ಪ್ರಕರಣದಲ್ಲಿ ಇನ್ಫೋಸಿಸ್‌ ಉದ್ಯೋಗಿಯನ್ನ ಬಂಧನ ಮಾಡಲಾಗಿದೆ.

ಇನ್ನೂ ಸ್ಥಳದಲ್ಲಿ ಕೂಡಲೇ ಮಹಿಳೆ ಕಿರುಚಾಡಿದ್ದು, ನಂತರ ಅಲ್ಲಿಯೇ ಆತ ಮಹಿಳಾ ಉದ್ಯೋಗಿಗೆ ಕ್ಷಮೆ ಕೇಳಿದ್ದಾನೆ. ಬಳಿಕ ಎಚ್‌ಆರ್‌ ಸಿಬ್ಬಂದಿ ಬಂದು ಪರಿಶೀಲನೆ ಮಾಡಿದಾಗ ವಿಡಿಯೋ ಪತ್ತೆಯಾಗಿದೆ. ಸುಮಾರು 30ಕ್ಕೂ ಅಧಿಕ ಮಹಿಳೆಯರ ವಿಡಿಯೋ ಆತನ ಮೊಬೈಲ್​ನಲ್ಲಿ ಇರುವುದು ಕಂಡುಬಂದಿದೆ.

28 ವರ್ಷದ ಆಂಧ್ರಪ್ರದೇಶ ಮೂಲದ ಈತ ರಹಸ್ಯವಾಗಿ ತನ್ನ ಮೊಬೈಲ್‌ನಲ್ಲಿ ಪಕ್ಕದ ಶೌಚಾಲಯದ ಕಮೋಡ್‌ ಮೇಲೆ ನಿಂತು ಮಹಿಳಾ ಉದ್ಯೋಗಿಯ ವಿಡಿಯೋ ರೆಕಾರ್ಡ್‌ ಮಾಡಿದ್ದ. ಈತ ರೆಕಾರ್ಡ್ ಮಾಡುತ್ತಿರುವುದು ಎದುರುಗಡೆ ಡೋರ್ ಮೇಲೆ ಪ್ರತಿಬಿಂದ ಮೂಡಿದ್ದರಿಂದ, ಆಗ ಮೊಬೈಲ್ ನಲ್ಲಿ ರೆಕಾರ್ಡ್ ಮಾಡುವಾಗ ಆರೋಪಿ ಸಿಕ್ಕಿಬಿದ್ದಿದ್ದಾನೆ.

(ಏಜೆನ್ಸೀಸ್)

ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ. ಈ ಘಟನೆಯು ಕಾರ್ಪೊರೇಟ್ ಕೆಲಸದ ಸ್ಥಳಗಳಲ್ಲಿ ಗೌಪ್ಯತೆ ಮತ್ತು ಸುರಕ್ಷತೆಯ ಬಗ್ಗೆ ಗಂಭೀರ ಕಳವಳವನ್ನು ಹುಟ್ಟುಹಾಕಿದ್ದು, ಕಚೇರಿ ಸ್ಥಳದಲ್ಲಿ ಕಟ್ಟುನಿಟ್ಟಿನ ಕಣ್ಗಾವಲು ಕ್ರಮಗಳನ್ನು ಹೆಚ್ಚಿಸಿದೆ.

ಈ ವಿಷಯವನ್ನು ತನ್ನ ಪತಿಯೊಂದಿಗೆ ಚರ್ಚಿಸಿದ ಬಳಿಕ, ಮಹಿಳೆ ಪೊಲೀಸರನ್ನು ಸಂಪರ್ಕಿಸಿ ಇಂತಹ ಕೃತ್ಯಗಳು ಮರುಕಳಿಸಬಹುದೆಂಬ ಆತಂಕ ವ್ಯಕ್ತಪಡಿಸಿ, ಕೆಲಸದ ಸ್ಥಳದಲ್ಲಿ ಇತರ ಮಹಿಳೆಯರಿಗೆ ಹಾನಿಯಾಗಬಹುದು ಎಂದು ಕಳವಳ ವ್ಯಕ್ತಪಡಿಸಿದ್ದಾರೆ. ಆರೋಪಿಗಳ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದ್ದಾರೆ.