ಶ್ರೀನಗರ: ಜಮ್ಮು-ಕಾಶ್ಮೀರದ ಕುಪ್ವಾರದಲ್ಲಿ ನಡೆದ ಉಗ್ರರ ವಿರುದ್ಧ ಕಾರ್ಯಾಚರಣೆಯ ಎನ್ಕೌಂಟರ್ನಲ್ಲಿ ಭದ್ರತಾ ಪಡೆಗಳು ಇಬ್ಬತು ಭಯೋತ್ಪಾದಕರನ್ನು ಹೊಡೆದುರುಳಿಸಿವೆ(Terrorists Killed) ಎಂದು ಶನಿವಾರ(ನ. 08) ಭಾರತೀಯ ಸೇನೆ ಮಾಹಿತಿ ನೀಡಿದೆ.
ಕುಪ್ವಾರಾದ ಕೇರನ್ ಸೆಕ್ಟರ್‌ನಲ್ಲಿ ಶುಕ್ರವಾರ ಗಡಿ ನಿಯಂತ್ರಣ ರೇಖೆಯಲ್ಲಿ ಒಳನುಸುಳುವಿಕೆ ಪ್ರಯತ್ನದ ಬಗ್ಗೆ ಖಚಿತ ಗುಪ್ತಚರ ಮಾಹಿತಿಯ ಆಧಾರದ ಮೇಲೆ ಭದ್ರತಾ ಪಡೆಗಳು ಜಂಟಿ ಕಾರ್ಯಾಚರಣೆಯನ್ನು ಪ್ರಾರಂಭಿಸಿದ್ದವು. ಈ ವೇಳೆ ಅನುಮಾನಸ್ಪದ ಚಲನವಲನಗಳನ್ನು ಪತ್ತೆ ಹಚ್ಚಿದಾಗ ಉಗ್ರರಿರುವುದು ಪತ್ತೆಯಾಗಿದೆ. ಈ ವೇಳೆ ಎರಡು ಕಡೆಯಿಂದ ಗುಂಡಿನ ಚಕಮಕಿ ನಡೆದಿದೆ ಎನ್ನಲಾಗಿದೆ.
ಈ ಕುರಿತು ಎಕ್ಸ್ನಲ್ಲಿ ಪೋಸ್ಟ್ ಮಾಡಿರುವ ಚಿನಾರ್ ಕಾರ್ಪ್ಸ್, ಆಪರೇಷನ್ ಪಿಂಪಲ್ ಕಾರ್ಯಾಚರಣೆ ಭಾಗವಾಗಿ ಒಳ ನುಸುಳುವಿಕೆ ಪ್ರಯತ್ನದ ಕುರಿತು ಗುಪ್ತಚರ ಏಜೆನ್ಸಿಗಳಿಂದ ಬಂದ ಖಚಿತ ಗುಪ್ತಚರ ಮಾಹಿತಿಯ ಆಧಾರದ ಮೇಲೆ ನ. 07ರಂದು, ಕುಪ್ವಾರಾದ ಕೇರನ್ ಸೆಕ್ಟರ್‌ನಲ್ಲಿ ಜಂಟಿ ಕಾರ್ಯಾಚರಣೆಯನ್ನು ಪ್ರಾರಂಭಿಸಲಾಯಿತು. ಭದ್ರತಾ ಪಡೆಗಳು ಅನುಮಾನಾಸ್ಪದ ಚಟುವಟಿಕೆಯನ್ನು ಉಗ್ರರನ್ನು ಪತ್ತೆ ಹಚ್ಚಿದ್ದರು. ಈ ವೇಳೆ ಭಯೋತ್ಪಾದಕರು ವಿವೇಚನಾರಹಿತವಾಗಿ ಗುಂಡು ಹಾರಿಸಿದರು. ಪ್ರತಿಯಾಗಿ ಪಡೆಗಳು ಗುಂಡು ಹಾರಿಸಿದ್ದು, ಇಬ್ಬರನ್ನು ಹತ್ಯೆ ಮಾಡಲಾಗಿದೆ. ಕಾರ್ಯಾಚರಣೆ ಇನ್ನು ಮುಂದುವರೆದಿದೆ ಎಂದು ತಿಳಿಸಿದೆ. (ಏಜೆನ್ಸೀಸ್)